ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ Puneeth Rajkumar ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು ಎಂದು ತಿಳಿಸಿದ್ದಾರೆ.
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು.
ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು. pic.twitter.com/OPkqanw9EV
— Basavaraj S Bommai (@BSBommai) March 17, 2022
ನಮ್ಮೆಲ್ಲರ ಅಚ್ಚುಮೆಚ್ಚಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅವರ ಕೆಲಸಗಳನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು. ಅವರು ಬದುಕಿದ್ದಿದ್ದರೆ ಅವರ 47 ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದೆವು.ಅವರನ್ನು ಕಳೆದುಕೊಂಡು ದುಃಖದಲ್ಲಿದ್ದರೂ ಕೂಡ ಅವರ ಬದುಕು ನಮಗೆ ಸ್ಫೂರ್ತಿಯಾಗಿದೆ ಎಂದರು.
ಜೇಮ್ಸ್ ಚಿತ್ರಕ್ಕೆ ಶುಭ ಕೋರಿದ ಸಿಎಂ:
ಪುನೀತ್ ಅಭಿನಯದ ಸಿನಿಮಾ ಜೇಮ್ಸ್ James ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿಗಳು ಶುಭಾಶಯಗಳನ್ನು ಕೋರಿದರು.
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ
ಪುನೀತ್ ಅವರಿಗೆ ಮರಣೋತ್ತರ ವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ಆದಷ್ಟು ಶೀಘ್ರವಾಗಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ದಿನಾಂಕ ನಿಗದಿ ಮಾಡಲಾಗುವುದು. ಪುನೀತ ಹಾಗೂ ಡಾ: ರಾಜ್ ಕುಮಾರ್ ಅವರಿಗೆ ಗೌರವ ಬರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿಯನ್ನು ರಚಿಸಲಾಗುವುದು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post