ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಕ್ರಂ ಆಸ್ಪತ್ರೆಯಲ್ಲಿ ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ಇಂದು ಹೃದಯ ನೋವಿನಿಂದ ಆಸ್ಪತ್ರೆಗೆ ದಾಖಲಾದ ಪುನೀತ್ ಅವರಿಗೆ ವೈದ್ಯರು ಅತ್ಯುತ್ತಮ ಚಿಕಿತ್ಸೆ ನೀಡಿಲಾಗಿದ್ದರೂ ಫಲಕಾರಿಯಾಗದೇ ಅವರ ಕೊನೆಯುಸಿರೆಳೆದಿದ್ದಾರೆ ಎಂದರು.
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡಿಯ ರಾಜ್ಯಕ್ಕೆ ಪುನೀತ್ ನಿಧನ ತುಂಬಲಾರದ ನಷ್ಟವಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಗುವುದು. ಅಂತ್ಯಕ್ರಿಯೆ ಸ್ಥಳ ಇನ್ನೂ ನಿಗದಿಯಾಗಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post