ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ #Puneeth Rajkumar ನಿಧನರಾಗಿ ಇಂದಿಗೆ ನಾಲ್ಕು ವರ್ಷ ಕಳೆದಿದ್ದು, ಅಪ್ಪು ೪ನೇ ಪುಣ್ಯಸ್ಮರಣೆ ಹಿನ್ನೆಲೆ ಕಂಠೀರವ ಸ್ಟುಡಿಯೋದಲ್ಲಿ ಬಣ್ಣ ಬಣ್ಣದ ಗುಲಾಬಿ ಹೂವಿನ ಅಲಂಕಾರ ಮಾಡಲಾಗಿದ್ದ ಪುನೀತ್ ಸಮಾಧಿ ಸ್ಥಳದಲ್ಲಿ ಇಷ್ಟದ ಖಾದ್ಯಗಳನ್ನಿಟ್ಟು ಕುಟುಂಬಸ್ಥರು ಪೂಜೆ ನೆರವೇರಿಸಿದರು.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು, ಅಭಿಮಾನಿಗಳು ಉಪಸ್ಥಿತರಿದ್ದರು.

ಗಣ್ಯರ ಸಂತಾಪ
ಪುನೀತ್ ಪುಣ್ಯಸ್ಮರಣೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ಆರ್. ಅಶೋಕ್ ಸೇರಿದಂತೆ ಅನೇಕ ಗಣ್ಯರು ನಮನ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post