ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಪ್ಪು ಸಾಧಾರಣ ವ್ಯಕ್ತಿಯಲ್ಲ, ಆತ ಅಪಾರವಾದದ್ದನ್ನು ಸಾಧಿಸಿದ್ದಾರೆ. ಕೇವಲ ನಟನೆಯಿಂದಷ್ಟೇ ಜನರನ್ನು ಗೆಲ್ಲಲು ಸಾಧ್ಯವಿಲ್ಲ. ಆದರ್ಶಗಳ ಮೂಲಕ ಗೆಲ್ಲಬಹುದು ಅದು ನಮ್ಮ ಅಪ್ಪು ಮಾಡಿದ್ದಾರೆ ಎಂದು ಸೂಪರ್‌ಸ್ಟಾರ್ ರಜನಿಕಾಂತ್ Super Star Rajnikanth ಬಣ್ಣಿಸಿದ್ದಾರೆ.
ಕಿಕ್ಕಿರಿದು ಸೇರಿದ ಜನಸಾಗರದ ಮುಂದೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ನಟ ರಜನಿಕಾಂತ್, ಕಲಿಯುಗಕ್ಕೆ ಪುನೀತ್ ದೇವರ ಮಗು, ನಚಿಕೆತ, ಮಾರ್ಕಾಂಡೇಯರ ಸಾಲಿಗೆ ಸೇರುವವರು ಅವರು. ಎನ್ ಟಿಅರ್, ಎಂಜಿಆರ್, ಶಿವಾಜಿಗಣೇಶನ್, ರಾಜ್ ಕುಮಾರ್ ಅವರು 50 ವರ್ಷದಲ್ಲಿ ಸಾಧಿಸಿದ್ದನ್ನು ಅಪ್ಪು 20 ವರ್ಷಗಳಲ್ಲಿ ಸಾಧಿಸಿದ್ದರು. ಅಪ್ಪು ಯಾವಾಗಲೂ ನಮ್ಮೊಂದಿಗೇ ಇರ್ತಾರೆ. ಪುನೀತ್ ರಾಜ್‌ಕುಮಾರ್ ನಟ ಎಂಬ ಕಾರಣಕ್ಕೆ ಅವರ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ ಬರಲಿಲ್ಲ. ಅವರ ಮಾನವೀಯತೆಗೆ, ವ್ಯಕ್ತಿತ್ವಕ್ಕೆ ಜನ ಬಂದು ಭೇಟಿ ನೀಡಿದ್ದಾರೆ. ಪುನೀತ್ Puneeth ವ್ಯಕ್ತಿತ್ವ ಶ್ರೇಷ್ಟವಾದದ್ದು ಎಂದು ಹೇಳಿದರು.
Also read: ಪುನೀತ್ ರಾಜಕುಮಾರ್ ಮತ್ತೊಮ್ಮೆ ಈ ನಾಡಿನಲ್ಲಿ ಹುಟ್ಟಿ ಬನ್ನಿ: ಸಿಎಂ ಬೊಮ್ಮಾಯಿ
ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕನ್ನಡಿಗರಿಗೆ ತಿಳಿಸಿದ ಸೂಪರ್ ಸ್ಟಾರ್ ರಜಿನಿಕಾಂತ್, ವರನಟ ಡಾ. ರಾಜ್‌ಕುಮಾರ್ ಮತ್ತು 1979 ರಲ್ಲಿ ಶಬರಿ ಮಲೆ ಯಾತ್ರೆ ವೇಳೆ ತಾವು ಪುನೀತ್ ರಾಜ್ ಕುಮಾರ್ ಅವರನ್ನು ಮೊದಲ ಬಾರಿ ನೋಡಿದ್ದನ್ನು ಸ್ಮರಿಸಿಕೊಂಡರು,
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post