ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವರ್ ಸ್ಟಾರ್ ಪುನೀತ್ ರಾಜಕುಮಾರ್ Powerstar Puneeth Rajkumar ಅವರ ಪ್ರಥಮ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಯಾಟಲೈಟ್ ಸ್ಟೇಷನನ್ನು ಸಿಎಂ ಬಸವರಾಜ ಬೊಮ್ಮಾಯಿ CM Basavaraja Bommai ಇಂದು ಉದ್ಘಾಟಿಸಿದ್ದಾರೆ.
ಮಲ್ಲೇಶ್ವರ ಬಾಲಕರ ಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಶನ್ ವತಿಯಿಂದ ಸ್ಥಾಪಿಸಿರುವ ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಅನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು ಪುನೀತ್ ರಾಜಕುಮಾರ್ ಅವರನ್ನು ನೆನೆದು ಭಾವುಕರಾದರು.
ಇನ್ನು, ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 1.90 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಜಿಎಸ್ 3 ಉಪಗ್ರಹವನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಲ್ಲಿ ಒಂದು ಸ್ಯಾಟಲೈಟ್’ಗೆ ಪುನೀತ್ ಹೆಸರನ್ನು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದು ಶೀಘ್ರವೇ ನಭಕ್ಕೆ ಹಾರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post