ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಎಲ್ಲ ಸಿನಿಮಾ ಪ್ರದರ್ಶನ ಹಾಗೂ ಶೂಟಿಂಗ್ ಸೇರಿದಂತೆ ಚಿತ್ರರಂಗದ ಎಲ್ಲ ಚಟುವಟಿಕೆಗಳನ್ನು ತತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸ್ಯಾಂಡಲ್’ವುಡ್’ಗೆ ಅನಿರೀಕ್ಷಿತವಾಗಿ ಬಂದೆರಗಿದ ಆಘಾತ ಪುನೀತ್ ನಿಧನ. ಈ ಹಿನ್ನೆಲೆಯಲ್ಲಿ ಇಂದು 12 ಗಂಟೆಯಿಂದಲೇ ರಾಜ್ಯದಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ ಪ್ರದರ್ಶನವನ್ನು ಸ್ಥಗಿತಗೊಳಿಸಲು ಸೂಚಿಸಲಾಗಿದ್ದು, ಚಿತ್ರರಂಗದ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ.
ಅಲ್ಲದೇ, ಕನ್ನಡ ಚಿತ್ರರಂಗದ ಕೇಂದ್ರ ಸ್ಥಾನ ಗಾಂಧಿ ನಗರದಲ್ಲಿ ಅಂಗಡಿ ಮುಂಗಟ್ಟು ಹಾಗೂ ವ್ಯಾಪಾರಸ್ತರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post