ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿನ ಮಕ್ಕಳಿಗೆ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಗಳನ್ನು ಈಗಾಗಲೇ ತೆರೆಯಲಾಗಿದ್ದು, ಅವುಗಳನ್ನು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನ ನೆರವಿನೊಂದಿಗೆ ವಿಸ್ತರಿಸುವ ಕುರಿತು ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್,ಮಧು ಬಂಗಾರಪ್ಪ #Minister Madhu Bangarappa ವಿಧಾನಸೌಧದಲ್ಲಿ ಎಡಿಬಿ ಅಧಿಕಾರಿಗಳೊಂದಿಗೆ ಸಭೆ ನೆಡೆಸಿದರು.
ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್)ಗಳಿಂದಾಗಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ವಿಕಾಸ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದರ ಜೊತೆಗೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ಎಚ್ಚರ ವಹಿಸಿಸುವ ಕುರಿತಂತೆ ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
Also read: ಮಾ.15-18 ವಿಟಿಯು ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ‘ಸದೃಡ-2.0’

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post