ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಭಾರಿ ಮಳೆ #Heavy Rain ಆರ್ಭಟ ಚುರುಕಾಗಿದ್ದು, ಮುಂದಿನ 5 ದಿನಗಳವರೆಗೆ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ #Yellow Alert ಘೋಷಿಸಲಾಗಿದ್ದು, ರಾಜ್ಯಾದ್ಯಂತ ಮುಂದಿನ 5 ದಿನಗಳ ವರೆಗೆ ಅಂದರೆ ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಪ್ರಮುಖವಾಗಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದ್ದು, ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post