ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Central Finance Minister Nirmala Seetharaman ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮುಂಜಾನೆ ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಗವಿ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ಸಚಿವರನ್ನು ಮಹಿಳಾ ಬಿಜೆಪಿ ಕಾರ್ಯಕರ್ತೆಯರು ಆರತಿ ಬೆಳಗಿ, ಅರಶಿಣ ಕುಂಕುಮ ನೀಡಿ ಮಂತ್ರ ಘೋಷಗಳೊಂದಿಗೆ ಸ್ವಾಗತಿಸಿದರು.
ಆನಂತರ ವಿಧಾನಸೌಧಕ್ಕೆ ತೆರಳಿ ನಿರ್ಮಲಾ ಸೀತಾರಾಮನ್ ಅವರು ಅಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
Also read: ತನ್ನ ಪಾಡಿಗೆ ತಾನು ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕೊಂದ ದೂರ್ತ
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, CM Basavaraja Bommai ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, B S Yadiyurappa ರಾಜ್ಯ ಬಿಜೆಪಿ ಅಧ್ಯಕ್ಷರಾದ ಕಟೀಲ್, ಶಾಸಕ ರವಿಸುಬ್ರಹ್ಮಣ್ಯ, ಎಂಎಲ್’ಸಿ ಭಾರತಿ ಶೆಟ್ಟಿ, ಸಚಿವರು, ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post