ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯಸಭೆ ಚುನಾವಣೆಗೆ Rajyasabha Election ದಿನಾಂಕ ಘೋಷಣೆಯಾಗಿದ್ದು, ರಾಜ್ಯದ 4 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದೆ. ಹಾಗೂ ಅಂದೇ (ಜೂನ್ 10) ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾಗಿದ್ದ ನಿರ್ಮಲಾ ಸೀತಾರಾಮನ್, Nirmala Seetharaman ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ಅವರ ಅವಧಿ ಇದೇ ಜೂನ್ 30ರಂದು ಮುಗಿಯಲಿದೆ. ಹಾಗೂ ಈಗಾಗಲೇ ಆಸ್ಕರ್ ಫರ್ನಾಂಡೀಸ್ ನಿಧನದಿಂದ ತೆರವಾಗಿರುವ ಒಂದು ಸ್ಥಾನ ಸೇರಿದಂತೆ ನಾಲ್ಕು ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ.
ಮೇ 24ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಮೇ 31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ. 1ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 3ರಂದು ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 10ರಂದು ಮತದಾನ ಬೆಳಿಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಮತಏಣಿಕೆ ನಡೆಯಲಿದೆ.
ವಿಧಾನಪರಿಷತ್ಗೂ ಚುನಾವಣೆ ಘೋಷಣೆ:
ಇನ್ನೂ ಕರ್ನಾಟಕದ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳ ಸ್ಥಾನಗಳಿ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ವಾಯುವ್ಯ ಪದವೀಧರ ಕ್ಷೇತ್ರದ ನಿರಾಣಿ ಹನುಮಂತಪ್ಪ ರುದ್ರಪ್ಪ, ದಕ್ಷಿಣ ಪದವೀಧರ ಕ್ಷೇತ್ರದ ಕೆ.ಟಿ ಶ್ರೀಕಂಠೇಗೌಡ ಅವರ ಅವಧಿ ಜುಲೈ 4ಕ್ಕೆ ಮುಗಿಯಲಿದೆ. ಈ ಸ್ಥಾನಗಳಿಗೆ ಇದೇ ಜೂನ್ 13ರಂದು ಚುನಾವಣೆ ನಡೆಯಲಿದೆ.
Also read: ಎಜಿ ಅಂಡ್ ಪಿ ಪ್ರಥಮ್ ಸಂಸ್ಥೆಯಿಂದ ಎಲ್ಸಿಎನ್ಜಿ ಘಟಕ ಸ್ಥಾಪನೆ
ಮೇ. 26 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ. 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ಮೇ. 30 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್, 13ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜೂ.15 ಫಲಿತಾಂಶ ಪ್ರಕಟವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post