ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಮಚಂದ್ರಾಪುರ ಮಠ #Ramachandrapura Mutt ಹಾಗೂ ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ. ಇದು ರಾಜರಾಜೇಶ್ವರೀ ಅನುಗ್ರಹಿಸಿರುವ ಬಾಂಧವ್ಯ. ಈ ಬಾಂಧವ್ಯಕ್ಕೆ ಅವಳೇ ಸೇತುವೆ. ಎರಡೆಂದು ಕಂಡರೂ ಈ ಪೀಠಗಳು ಒಂದೇ ಎನ್ನುವ ಭಾವವೇರ್ಪಟ್ಟಿದೆ” ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು #Raghaveshwara Bharathi Shri ನುಡಿದರು.
ಶಕಟಪುರದ ಶ್ರೀವಿದ್ಯಾಪೀಠದ ಪರಮಪೂಜ್ಯ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀತೋಟಕಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು.

ಗಿರಿನಗರದ ಮಠಕ್ಕೆ ಆಗಮಿಸಿದ ಶಕಟಪುರದ ಶ್ರೀಗಳಿಗೆ ಶ್ರೀರಾಮಚಂದ್ರಾಪುರ ಮಠದ ವತಿಯಿಂದ ವೇದಘೋಷ, ಶಂಖನಾದ, ವಾದ್ಯ, ಪೂರ್ಣಕುಂಭಗಳ ಅದ್ದೂರಿ ಸ್ವಾಗತ ನೀಡಲಾಯಿತು. ಶ್ರೀಮಠದ ವತಿಯಿಂದ ವಿವಿಧ ಸುವಸ್ತುಗಳನ್ನು ಸಮರ್ಪಿಸಲಾಯಿತು. ಶಕಟಪುರದ ಶ್ರೀಪರಿವಾರದವರನ್ನು ಗೌರವಿಸಲಾಯಿತು.

ಶ್ರೀಮಠದ ವಿತ್ತಾಧ್ಯಕ್ಷ ಜೆ. ಎಲ್. ಗಣೇಶ, ಶಾಸನತಂತ್ರದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಶ್ರೀರಾಮಾಶ್ರಮ ಅಧ್ಯಕ್ಷ ರಮೇಶ ಹೆಗಡೆ ಕೋರಮಂಗಲ, ಶ್ರೀರಾಮಾಶ್ರಮ ಕಾರ್ಯದರ್ಶಿ ವಾದಿರಾಜ ಸಾಮಗ, ಹವ್ಯಕ ಮಹಾಮಂಡಲದ ಬೆಂಗಳೂರು ಪ್ರಾಂತ್ಯ ಉಪಾಧ್ಯಕ್ಷ ಜಿ.ಜಿ.ಹೆಗಡೆ ತಲೆಕೇರಿ, ದಕ್ಷಿಣ ಮಂಡಲ ಅಧ್ಯಕ್ಷ ಎನ್. ಜಿ. ಭಾಗ್ವತ್, ಉತ್ತರ ಮಂಡಲ ಅಧ್ಯಕ್ಷ ಎಲ್. ಆರ್. ಹೆಗಡೆ, ಲೋಕಸಂಪರ್ಕ ಖಂಡದ ಶ್ರೀಸಂಯೋಜಕ ರಾಮಚಂದ್ರ ಭಟ್ ಕೆಕ್ಕಾರು, ಸುಪ್ರಸಾರ ಖಂಡದ ಶ್ರೀಸಂಯೋಜಕಿ ಅಕ್ಷತಾ ಭಟ್ ಮುಂತಾದ ಪದಾಧಿಕಾರಿಗಳು ಹಾಗೂ ಶಕಟಪುರಮಠದ ಪದಾಧಿಕಾರಿಗಳು, ಶ್ರೀಪರಿವಾರದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post