ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಮೇಶ್ ಜಾರಕಿಹೋಳಿ ಅವರ ಸಿಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ಬಾಲಚಂದ್ರ ಜಾರಕಿಹೋಳಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಇದೊಂದು ನಕಲಿ ಸಿಡಿಯಾಗಿದೆ. ಈ ಬಗ್ಗೆ ಸಿಬಿಐ ಅಥವಾ ಸಿಐಡಿ ತನಿಖೆಯಾಗಬೇಕು. ರಮೇಶ್ ಜಾರಕಿಹೋಳಿ ರಾಜೀನಾಮೆ ಅಗತ್ಯವಿಲ್ಲ. ಈ ಆರೋಪದ ಹಿಂದೆ ಪ್ರಭಾವಿಗಳ ಕೈವಾಡವಿದ್ದು, ಸಂಬಂಧಪಟ್ಟವರ್‍ತ ವಿರುದ್ದ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವ ಕುರಿತು ವಕೀಲರ ಜೊತ ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಪ್ರಕರಣದ ಸಮಗ್ರ ತನಿಖೆಯಾಗಬೇಕಿದೆ. ಈ ರೀತಿ ಸಿಡಿಗಳನ್ನು ಗಂಭೀರವಾಗಿ ಪರಿಗಣಿಸಿಕೊಂಡು ಹೋದರೆ ರಾಜಕಾರಣ ಮಾಡುವುದೇ ಕಷ್ಟವಾಗುತ್ತದೆ. ಜಾರಕಿಹೋಳಿ ಕುಟುಂಬದ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಈ ಘಟನೆಯ ಸತ್ಯಾಸತ್ಯತೆ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ. ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೋಳಿ ಬೆಂಗಳೂರಿನಲ್ಲಿ ಇದ್ದಾರೆ. ದೆಹಲಿಗೆ ಹೋಗುತ್ತಿಲ್ಲ. ಪ್ರಕರಣದ ವಿಡಿಯೋಗಳನ್ನು ವಿದೇಶಗಳಿಂದ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿರುವ ಮಾಹಿತಿಗಳಿವೆ. ಹೀಗಾಗಿ ಸಿಬಿಐ ತನಿಖೆಗೆ ಒತ್ತಾಯ ಮಾಡಿದ್ದೇವೆ. ನಾವು ಸಹ ಕಾನೂನು ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post