ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ #Ramehwaram Cafe Blast ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಇರಿಸಿ ತಲೆ ಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಎನ್’ಐಎ #NIA ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್’ಐಎ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಕೃತ್ಯ ಎಸಗಿ ಮುಸಾವೀರ್ ಹುಸೇನ್ ತಲೆಮರೆಸಿಕೊಂಡಿದ್ದು, ಕೋಲ್ಕತ್ತಾಕ್ಕೆ ಹಾರಿ ಅಡಗಿದ್ದಕೊಂಡಿದ್ದ. ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿದ್ದ ಬಾಂಬರ್ ಮುಸಾವೀರ್’ನನ್ನು ಬಂಧಿಸಲಾಗಿದೆ. ಈತನ ಜೊತೆಗೆ ಅಡಗಿದ್ದ ಅಬ್ದುಲ್ ಮತೀನ್ ನನ್ನು ಕೂಡ ಹಡೆ ಮುರಿ ಕಟ್ಟಲಾಗಿದೆ. ಈತ ಮುಸಾವೀರ್’ಗೆ ಸಂಚು ನಡೆಸಲು ನೆರವು ನೀಡಿದ್ದ ಎಂದು ವರದಿಯಾಗಿದೆ.
ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ಸ್ಫೋಟಕ್ಕೆ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು ಎಂದು ಹೇಳಲಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಇವರಿಗೆ ಸಹಾಯ ಮಾಡಿದ್ದ ಮುಜಾಮೀಲ್ ಷರೀಫ್ ಎಂಬಾತನನ್ನು ಕೂಡ ನಸುಕಿನ 2.30ರ ವೇಳೆಗೆ ಬಂಧಿಸಲಾಗಿದೆ ಎಂದು ಎನ್’ಐಎ ಮೂಲಗಳು ತಿಳಿಸಿವೆ.
Also read: ಲೋಕಾ ಚುನಾವಣೆ | ಈಶ್ವರಪ್ಪ ಅಧಿಕೃತವಾಗಿ ರಣರಂಗಕ್ಕೆ | ಮಾಜಿ ಡಿಸಿಎಂ ನಾಮಪತ್ರ ಸಲ್ಲಿಕೆ
ಇನ್ನು ಬಂಧನ ತಪ್ಪಿಸಿಕೊಳ್ಳಲು ಇಬ್ಬರೂ ಶಂಕಿತ ಉಗ್ರರು ಅಸ್ಸಾಂ ಮತ್ತು ಬಂಗಾಳದಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದರು ಎಂದು ಹೇಳಲಾಗಿದೆ. ಆದರೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಎನ್’ಐಎ ತಂಡ ಇದೀಗ ಇಬ್ಬರೂ ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಾರ್ಚ್ 1 ರಂದು ಬೆಂಗಳೂರು ವೈಟ್ ಫೀಲ್ಡ್’ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post