ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಸೇರಿದಂತೆ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ರಾಮೇಶ್ವರಂ ಕೆಫೆ ಸ್ಫೋಟದ Rameshwaram Cafe Blast ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಹಿಂದಿನ ರೂವಾರಿಯ ಚಹರೆ ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ.
ವರದಿಗಳಂತೆ, ಮಾಸ್ಕ್, Mask ಕನ್ನಡಕ ಮತ್ತು ಕನ್ನಡಕ ಧರಿಸಿ ಮುಖ ಮುಚ್ಚಿಕೊಂಡಿದ್ದ ಪ್ರಮುಖ ಆರೋಪಿಯ ಚಲನವನಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆತ ಕೆಫೆಯಲ್ಲಿ ರವೆ ಇಡ್ಲಿ ಖರೀದಿಸಿದ್ದ ಎನ್ನಲಾಗಿದೆ.
ಆರೋಪಿಯು ಬಾಂಬ್ ಇದ್ದ ಬ್ಯಾಗನ್ನು ಕೆಫೆಯೊಳಗೆ ಇಟ್ಟು ಬಾಂಬ್ ಸ್ಪೋಟವಾಗುವ ಮೊದಲು ಕೆಫೆಯಿಂದ ಹೊರ ನಡೆದಿದ್ದ. ಇದೇ ವೇಳೆ, ಮಡಿವಾಳದ ಟೆಕ್ನಿಕಲ್ ಸೆಂಟರ್’ನಲ್ಲಿ ಬೇರೆ ಬೇರೆ ಸ್ಥಳದಲ್ಲಿರಿಸಿ ಮೂವರನ್ನೂ ಸಿಸಿಬಿ ವಿಚಾರಣೆ ನಡೆಸುತ್ತಿದೆ. ಸ್ಪೋಟಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಸಿಸಿಬಿ ಕಲೆ ಹಾಕುತ್ತಿದ್ದು, ಓರ್ವನನ್ನು ಡಿಜೆ ಹಳ್ಳಿಯಿಂದ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಇನ್ನು, ಪ್ರಕರಣದ ಉಗ್ರ ಬಿಎಂಟಿಸಿ ಬಸ್’ನಲ್ಲಿ ಓಡಾಡಿದ್ದ ಎನ್ನಲಾಗಿದ್ದು, ಈ ಸಂಬಂಧ ಬಿಎಂಟಿಸಿ ಅಧಿಕಾರಿಗಳಿಂದ ಪೊಲೀಸ್ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಶಂಕಿತ ಓಡಾಡಿರುವ ಬಿಎಂಟಿಸಿ ಬಸ್ ಆಧರಿಸಿ ಸಿಸಿ ಟಿವಿ ವೀಡಿಯೋಗಳನ್ನು ಕೊಡುವಂತೆ ಬಿಎಂಟಿಸಿಯ ಭದ್ರತೆ ವಿಭಾಗಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.
ನಗರದಲ್ಲಿ ಕಟ್ಟೆಚ್ಚರ
ಬಾಂಬ್ ಸ್ಫೋಟದ ಸುದ್ದಿ ಹೊರಬಿದ್ದ ಕೂಡಲೇ ನಗರ ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ನಗರದ ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಮೆಟ್ರೋ ರೈಲು ನಿಲ್ದಾಣಗಳು, ಮಾರುಕಟ್ಟೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಪ್ರದೇಶಗಳಲ್ಲಿ ನಿಗಾವಹಿಸಿದ್ದಾರೆ. ವಿಧಾನಸೌಧ, ಹೈಕೋರ್ಟ್, ವಿಕಾಸ ಸೌಧ, ರಾಜಭವನ, ಮೆಜೆಸ್ಟಿಕ್ ಸೇರಿ ಜನನಿಬಿಡ ಪ್ರದೇಶ ಸೇರಿ ಸರ್ಕಾರಿ ಕಟ್ಟಡಗಳಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
Also read: ರಾಮೇಶ್ವರಂ ಕೆಫೆ ಸ್ಪೋಟಕ್ಕೂ ಮಂಗಳೂರು ಕುಕ್ಕರ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್’ಗೂ ಲಿಂಕ್?
ಜನನಿಬಿಡ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುವವರು ಹಾಗೂ ಅನುಮಾನಾಸ್ಪದ ವಸ್ತುಗಳ ಬಗ್ಗೆ ನಿಗಾವಹಿಸಿದ್ದಾರೆ. ಅಂತೆಯೇ ಪೊಲೀಸರ ಗಸ್ತು ಹೆಚ್ಚಿಸಿ, ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಕಣ್ಣಿಡಲಾಗಿದೆ. ಇನ್ನು ಬಸ್ ನಿಲ್ದಾಣಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪವಾಗಿ ಕಂಡುಬರುವ ಲಗೇಜ್ ತಪಾಸಣೆ ಮಾಡಲು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post