No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅತ್ಯಾಚಾರ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 26, 2021
in ಬೆಂಗಳೂರು ನಗರ
0
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಇನ್ನು, ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಅದು ಯಾರೇ ಆಗಿರಲಿ ಅವರ ಮೇಲೆ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಿ ಎಂದು ಶಿವಕುಮಾರ್ ಅವರು ಛೇಡಿಸಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮದವರ ಜತೆ ಗುರುವಾರ ಮಾತನಾಡಿದರು.


‘ಇಡೀ ವಿಶ್ವವೇ ನಮ್ಮನ್ನು ಗೌರವದಿಂದ ನೋಡುತ್ತಿದೆ.‌ ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಇಲಾಖೆಯ ಮರ್ಯಾದೆ ಹಾಳು ಮಾಡಬಾರದು ಎಂದು ಈ ಹಿಂದೆ ಹಲವು ಬಾರಿ ಮನವಿ ಮಾಡಿದ್ದೆ. ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ. ಆರೋಪಿಗಳ ರಕ್ಷಣೆಗೆ ನಿಲ್ಲಬೇಡಿ ಎಂದು ನಾನು ವಿಧಾನಸಭೆ ಅಧಿವೇಶನದಲ್ಲೂ ಆಗ್ರಹಿಸಿದ್ದೆ. ಮಾಧ್ಯಮಗಳ ಮುಂದೆಯೂ ಹೇಳಿದ್ದೆ. ಆದರೆ ಈ ಸರಕಾರ ಬೇಜವಾಬ್ದಾರಿ ಮೆರೆಯುತ್ತಿದೆ ಎಂದು ಟೀಕಿಸಿದರು.


ಈಗಿರುವ ಗೃಹ ಸಚಿವರ ಕ್ಷೇತ್ರದಲ್ಲಿ, ಬೆಂಗಳೂರಿನಲ್ಲಿ, ಮೈಸೂರಿನಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಈ ಹಿಂದೆ ಮಂತ್ರಿಯಾಗಿದ್ದವರ ಮೇಲೂ ಅತ್ಯಾಚಾರ ಆರೋಪ ಕೇಳಿಬಂದಿವೆ. ಮೈಸೂರಿನಲ್ಲಿ ಘಟನೆ ನಡೆದು 48 ಗಂಟೆಗಳಾಗಿವೆ. ಆದರೂ ಇದುವರೆಗೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವೂ ಆಗಿಲ್ಲ. ಇದಕ್ಕಿಂತ ನಾಚಿಕೆಗೇಡಿನ ವಿಚಾರ ಮತ್ತೊಂದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್ ನವರು ನನ್ನನ್ನು ರೇಪ್ ಮಾಡುತ್ತಿದ್ದಾರೆ ಎಂದು ನೂತನ ಗೃಹ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಅವರನ್ನು ಯಾವ ಕಾಂಗ್ರೆಸಿಗರು ರೇಪ್ ಮಾಡಿದ್ದಾರೆ..?! ಗೃಹ ಸಚಿವರ ಮೇಲೆ ಯಾರು ರೇಪ್ ಮಾಡಿದ್ದಾರೋ, ಅದು ಯಾವುದೇ ನಾಯಕರಾಗಿರಲಿ, ಅವರ ಮೇಲೆ ಪೊಲೀಸರು 376 ಕಾಯ್ದೆ ಅನ್ವಯ ದೂರು ದಾಖಲಿಸಿ, ಬಂಧಿಸಲಿ ಎಂದು ನಾನು ಪೊಲೀಸ್ ಮಹಾ ನಿರ್ದೇಶಕರನ್ನು (ಡಿಜಿಪಿ) ಆಗ್ರಹಿಸುತ್ತಿದ್ದೇನೆ. ಅವರ ಬಾಯಲ್ಲಿ ರೇಪ್ ಎಂಬ ಪದ ಇಷ್ಟು ಸಲೀಸಾಗಿ ಬರುತ್ತಿರುವುದನ್ನು ನೋಡಿದರೆ ಅವರಿಗೆ ರೇಪ್ ಎಂಬ ಪದದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದು ಗೊತ್ತಾಗುತ್ತದೆ. ಈ ವಿಚಾರವಾಗಿ ನಾನು ಗೃಹ ಸಚಿವರಿಂದ ಯಾವುದೇ ಉತ್ತರ ನಿರೀಕ್ಷಿಸುವುದಿಲ್ಲ. ಅವರ ಪಕ್ಷದ ಎಲ್ಲ ನಾಯಕರೂ ಅವರ ಹೇಳಿಕೆಗೆ ಉತ್ತರಿಸಬೇಕು. ಕಾಂಗ್ರೆಸ್ ಗೃಹ ಸಚಿವರನ್ನೇ ರೇಪ್ ಮಾಡುತ್ತಿದೆ ಎನ್ನುವುದಾದರೇ ಇವರ ಆಡಳಿತ ಯಾವ ಹಂತಕ್ಕೆ ಬಂದು ನಿಂತಿದೆ ಎಂದು ಕುಟುಕಿದರು.

ಇವರಿಗೆ ನಾವು ಸಹಕಾರ ನೀಡಬೇಕಂತೆ. ಯಾವ ಸಹಕಾರ ನೀಡಬೇಕು? ಸರಕಾರ ಎಸ್ಐಟಿ ತನಿಖಾ ತಂಡ ರಚಿಸಿದೆ. ಅತ್ಯಾಚಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರೋ ಪೊಲೀಸರು ಮರ್ಯಾದೆ ಕಳೆದುಕೊಂಡಿದ್ದಾರೆ. ಪೊಲೀಸರಿಗೆ ಇಂಥ ದುಸ್ಥಿತಿ ಬರಬಾರದಿತ್ತು. ಇದರಿಂದ ರಾಜ್ಯದ ಘನತೆಗೆ ಧಕ್ಕೆಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ನೋವು ವ್ಯಕ್ತಪಡಿಸಿದರು.||

ಮೈಸೂರು ದುರ್ಘಟನೆಗೆ ಸಂಬಂಧಿಸಿದಂತೆ ಉಗ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ತನಿಖಾ ಸಮಿತಿ ರಚಿಸಿದ್ದೇವೆ. ಈ ಸಮಿತಿಯಲ್ಲಿ ಎಚ್.ಎಂ ರೇವಣ್ಣ, ಶಾಸಕ ತನ್ವಿರ್ ಸೇಠ್, ರೂಪಾ ಶಶಿಧರ್, ಮಲ್ಲಜಮ್ಮ, ಮಾನಸ ಮಂಜುಳಾ, ಮಂಜುಳಾ ನಾಯ್ಡು ಅವರು ಇದ್ದಾರೆ. ಈ ಸಮಿತಿ ಕೂಡಲೇ ಮೈಸೂರಿಗೆ ಹೋಗಿ, ಪ್ರಕರಣದ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಇನ್ನು ಗೃಹ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ಅತ್ಯಾಚಾರ ಸಂತ್ರಸ್ಥೆಯ ಗುರುತನ್ನು ಬಹಿರಂಗಪಡಿಸಿದ್ದು, ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಿ ದಾಖಲೆ ಸರಿಪಡಿಸಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಈ ಸರ್ಕಾರ ನಮ್ಮ ರಾಜ್ಯವನ್ನು ನೀಚ ಸಂಸ್ಕೃತಿಗೆ ತೆಗೆದುಕೊಂಡು ಹೋಗುತ್ತಿದ್ದು, ಇದನ್ನು ನಾವು ಖಂಡಿಸುತ್ತೇವೆ. ಸಂತ್ರಸ್ಥರಿಗೆ ನ್ಯಾಯ ಒದಗಿಸಿಕೊಡಲು ಪೊಲೀಸರು ಕೆಲಸ ಮಾಡಬೇಕು. ಈ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ನಮ್ಮಲ್ಲಿ ಚಾಣಾಕ್ಷ ಪೊಲೀಸರಿದ್ದಾರೆ. ಅನೇಕ ಕ್ಲಿಷ್ಟ ಪ್ರಕರಣಗಳನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ್ದಾರೆ. ನನಗಿರುವ ಅಲ್ಪ ಪ್ರಮಾಣದ ಮಾಹಿತಿಯಲ್ಲಿ ರೇಪ್ ಆದ ಸಮಯದಲ್ಲಿ ಆ ಪ್ರದೇಶದ ಸುತ್ತಮುತ್ತಲಿನಲ್ಲಿರುವ ಮೊಬೈಲ್ ಟವರ್ ಮೂಲಕ ಯಾರ್ಯಾರು ಆ ಪ್ರದೇಶದಲ್ಲಿ ಇದ್ದರು ಎಂಬ ಜಾಡು ಹಿಡಿದರೆ ಈ ದುಷ್ಕೃತ್ಯ ಮಾಡಿದವರನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಬಹುದು. ಆದರೆ 48 ಗಂಟೆಗಳಾದರೂ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಮಾಧ್ಯಮಗಳಲ್ಲಿ ಈ ವಿಚಾರ ಪ್ರಸ್ತಾಪವಾದ ನಂತರ ಸರ್ಕಾರ ಈ ವಿಚಾರವಾಗಿ ಕಣ್ಣು ಬಿಡಲಾರಂಭಿಸಿದೆ. ಇದು ಸರಕಾರದ ಅಸಡ್ಡೆಗೆ ಸಾಕ್ಷಿ ಎಂದು ಆರೋಪಿಸಿದರು.

ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮಾಜಿ ಸಚಿವರಾದ ಎಚ್.ಎಂ ರೇವಣ್ಣ, ಮೋಟಮ್ಮ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಹಿಳಾ ಹೋರಾಟಗಾರ್ತಿ ಮಂಜುಳಾ ನಾಯ್ಡು, ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಸಂಚಾಲಕರಾದ ರಾಮಚಂದ್ರಪ್ಪ, ಸಲೀಂ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreD K ShivakumarHome MinisterKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಗೃಹ ಮಂತ್ರಿಡಿ.ಕೆ. ಶಿವಕುಮಾರ್‌ಬೆಂಗಳೂರು:
Share212Tweet123Send
Previous Post

ಸಮಾಜಕ್ಕಾಗಿ ಮಾಡುವ ಸಮರ್ಪಣೆ ಔದಾರ್ಯವಲ್ಲ, ಅದು ಕರ್ತವ್ಯ: ರಾಘವೇಶ್ವರ ಶ್ರೀ 

Next Post

ಗಮನಿಸಿ! ಆ. 27 – 31ರವರೆಗೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ನೀರು ಸರಬರಾಜು ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಗಮನಿಸಿ! ಆ. 27 - 31ರವರೆಗೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ನೀರು ಸರಬರಾಜು ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL