ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅತ್ಯಾಚಾರ ಪ್ರಕರಣದ #Rape Case ಆರೋಪ ಹೊತ್ತಿರುವ ಹಾಸನ ಮಾಜಿ ಸಂಸದ, ಮಾಜಿ ಪ್ರಧಾನಿ ದೇವೇಗೌಡರ #Devegowda ಮೊಮ್ಮಗ ಪ್ರಜ್ವಲ್ ರೇವಣ್ಣ #Prajwal Revanna ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾ. ಗಜಾನನ ಭಟ್ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್ ಹಾಲ್’ನಲ್ಲಿ ಹಾಜರಿದ್ದರು.
ಇನ್ನು, ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್ ರೇವಣ್ಣ ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿದೆ.
ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿ ಇಂದಿಗೆ ಮುಂದೂಡಿತ್ತು.
ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಮಹತ್ವ ಪಡೆದಿದೆ. ಈ ಪ್ರಕರಣ ಅಲ್ಲದೇ ಇನ್ನೂ 2 ಪ್ರಕರಣದಲ್ಲಿ ತೀರ್ಪು ಬರಬೇಕಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಕಳೆದ ಕಳೆದ 14 ತಿಂಗಳಿನಿAದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಷನ್‌ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು.
ಐಪಿಸಿ ಸೆಷನ್ 376 (2)(ಕೆ) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (ಎನ್) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(ಎ) ಲೈಂಗಿಕತೆ ಬೇಡಿಕೆ ಇಡುವುದು. 354 (ಬಿ) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (ಬಿ) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯ ನಾಶದ ಅಡಿ ದೋಷಾರೋಪ ಹೊರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















