ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆ.ಆರ್. ನಗರದ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ #Rape Case ನಡೆಸಿದ ಅರೋಪದಲ್ಲಿ ನಿನ್ನೆ ನ್ಯಾಯಾಲಯದಿಂದ ದೋಷಿ ಎಂದು ಘೋಷಣೆ ಮಾಡಲಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ #Prajwal Revanna ಜೀವಾವಧಿಶಿಕ್ಷೆ ವಿಧಿಸಲಾಗಿದೆ.
ಈ ಕುರಿತಂತೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿ, 5 ಲಕ್ಷ ರೂ. ದಂಡ ವಿಧಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾ. ಗಜಾನನ ಭಟ್ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್ ಹಾಲ್’ನಲ್ಲಿ ಹಾಜರಿದ್ದರು.
26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿತ್ತು.
ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿ ಇಂದಿಗೆ ಮುಂದೂಡಿತ್ತು.
ಪ್ರಜಲ್ವ್ ರೇವಣ್ಣ ಕಳೆದ ಕಳೆದ 14 ತಿಂಗಳಿನಿಂದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಷನ್‌ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು.
ಐಪಿಸಿ ಸೆಷನ್ 376 (2)(ಕೆ) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (ಎನ್) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(ಎ) ಲೈಂಗಿಕತೆ ಬೇಡಿಕೆ ಇಡುವುದು. 354 (ಬಿ) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (ಬಿ) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯ ನಾಶದ ಅಡಿ ದೋಷಾರೋಪ ಹೊರಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post