ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು (Bangalore) ನಗರದ ಬಸವನಗುಡಿಯ ತ್ಯಾಗರಾಜನಗರದಲ್ಲಿರುವ (Raghavendra Swamy) ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ 355ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಆರಂಭಗೊಂಡಿದೆ. ಮಂತ್ರಾಲಯ ಪೀಠಾಧಿಪತಿ ಶ್ರೀ ಸುಭುಧೇಂದ್ರ ತೀರ್ಥ ಶ್ರೀಪಾದರ ಪರಿಪೂರ್ಣ ಆಶೀರ್ವಾದದೊಂದಿಗೆ ಆರಾಧನಾ ಮಹೋತ್ಸವಕ್ಕೆ ಶುಭಾರಂಭವಾಯಿತು.
ತಂಬಿಹಳ್ಳಿಯ ಶ್ರೀಮನ್ ಮಾಧವ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಧನ, ಧಾನ್ಯ ಹಾಗೂ ಗೋವಿನ ಪೂಜೆ ನೆರವೇರಿಸುವ ಮೂಲಕ ಆರಾಧನಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.
ನೂರಾರು ಭಕ್ತರ ಸಮ್ಮುಖದಲ್ಲಿ ನವೀಕೃತ ತ್ಯಾಗರಾಜನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮೂರು ದಿನಗಳ ಕಾಲ ಆರಾಧನಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಆರಾಧನಾ ಮಹೋತ್ಸವದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಲೋಕಸಭಾ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್ ಹಾಗೂ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಮಣ್ಯ, ಟಿ.ಎ. ಶರವಣ, ಬಿಜೆಪಿ ಮುಖಂಡ ಸಂಗಾತಿ ವೆಂಕಟೇಶ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ದಿಲೀಪ್ ಕುಮಾರ್, ವಿಶ್ವ ಮಧ್ವಮತ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ವೆಂಕೋಬ ರಾವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Also Read>> ‘ಅಮ್ಮ… ನಾನ್ನ’! ಅಪ್ಪನ ಸ್ಕೂಟರ್ ತಬ್ಬಿ ಅಳುತ್ತಾ ನಿಂತ 3 ವರ್ಷದ ಮಗು | ನದಿಗೆ ಹಾರಿದ ಅಪ್ಪ-ಅಮ್ಮ
ಮಹೋತ್ಸವಕ್ಕೆ ಆಗಮಿಸುವ ಭಕ್ತರು ಹಾಗೂ ಗಣ್ಯರು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ರಾಯರ ಕೃಪೆಗೆ ಪಾತ್ರರಾಗಲಿದ್ದಾರೆ.
Bangalore : ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
ಮೂರು ದಿನಗಳ ಕಾಲ ನಡೆಯಲಿರುವ ಆರಾಧನಾ ಮಹೋತ್ಸವದಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು, ಭಜನೆ, ಪ್ರವಚನ ಸೇರಿದಂತೆ ವಿವಿಧ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಠದ ವಕ್ತಾರರು ತಿಳಿಸಿದ್ದಾರೆ.
ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಠವನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ಭಕ್ತರಿಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಹಾಗೂ ಆಶೀರ್ವಾದ ಪಡೆಯುವ ನಿರೀಕ್ಷೆಯಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









