ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳ ಕಾಲ ಎಲ್ಲ ಚುನಾವಣೆಗಳನ್ನು ಮುಂದೂಡುವಂತೆ ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಂದಿನ 14 ದಿನ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗುವುದು. ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ತಾಲೂಕು, ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಚುನಾವಣೆಗಳನ್ನೂ ಪರಿಸ್ಥಿತಿ ಸುಧಾರಿಸುವವರೆಗೂ ಮುಂದೂಡುವಂತೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post