ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅನಾರೋಗ್ಯಕ್ಕೆ ಒಳಗಾಗಿ, ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ #H D Devegowda ಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್‌ನಿಂದ #Fever and Urine Infection ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು ಒಂದು ವಾರಗಳ ಕಾಲ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಈಗ ಸಂಪೂರ್ಣ ಗುಣಮುಖರಾಗಿದ್ದಾರೆ.
ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದು, ಮುಂದಿನ 15 ದಿನಗಳ ಕಾಲ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಅವರು ಭೇಟಿಯಾಗುವುದಿಲ್ಲ ಎಂದು ತಿಳಿದುಬಂದಿದೆ.
ಚಿಕಿತ್ಸೆಯ ನಂತರ ಮಾಜಿ ಪ್ರಧಾನಿಯವರು ಸಂಫೂರ್ಣ ಗುಣಮುಖರಾಗಿದ್ದು, ಲವಲವಿಕೆಯಿಂದ ಇದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post