ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಳೆದ ಎರಡು ವಾರಗಳ ಹಿಂದೆ ಭಾರೀ ಮಳೆಯಿಂದ ತತ್ತರಿಸಿದ್ದ ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್ Red alert ಘೋಷಣೆ ಮಾಡಲಾಗಿದ್ದು, ಶಿವಮೊಗ್ಗ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯ Heavy Rain ಮುನ್ಸೂಚನೆ ನೀಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಆಗಸ್ಟ್ 5ರ ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಹಾಸನ, ಶಿವಮೊಗ್ಗ, ಗದಗ, ದಾರವಾಡ ಹಾಗೂ ಬೆಳಗಾಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Orange alert ಘೋಷಣೆ ಮಾಡಲಾಗಿದೆ.
ಆಗಸ್ಟ್ 6ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಹಾಸನ, ಹಾವೇರಿ, ಗದಗ, ದಾರವಾಢ, ಬೆಳಗಾಂ, ಯಾದಗಿರಿ, ಗುಲಬರ್ಗಾ ಹಾಗೂ ಬೀದರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Also read: ಸಾಗರ: ಅತಿವೃಷ್ಟಿಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ
ಆಗಸ್ಟ್ 7ರಂದು ಬೆಳಗಾಂ, ದಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಗುಲ್ಬರ್ಗಾ ಹಾಗೂ ಬೀದರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 8ರಂದು ಗುಲ್ಬರ್ಗಾ, ಯಾದಗಿರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post