No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳ ಕಲಿಕಾ ಅವಧಿ ಕಡಿತ: ಸಿದ್ಧರಾಮಯ್ಯ ಆಕ್ರೋಶ

kalpa News by kalpa News
June 19, 2021
in ಬೆಂಗಳೂರು ನಗರ
0
ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

Internet Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮೂರು ವರ್ಷಗಳ ಅವಧಿಯ ಪದವಿ ಶಿಕ್ಷಣದಲ್ಲಿ ಭಾಷಾ ವಿಷಯಗಳನ್ನು ನಾಲ್ಕು ಸೆಮಿಸ್ಟರ್‌ಗಳ ಅವಧಿಗಳಲ್ಲಿ ಕಲಿಸುತ್ತಿದ್ದು ಅದನ್ನು ಒಂದು ವರ್ಷದ ಅವಧಿಯ ಎರಡು ಸೆಮಿಸ್ಟರ್‌ಗಳಿಗೆ ಮಿತಿಗೊಳಿಸಿರುವುದು ಕನ್ನಡಕ್ಕೆ ಮಾಡಿದ ದ್ರೋಹ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಹೊಸ ಶಿಕ್ಷಣ ನೀತಿಯ ಭಾಗವಾಗಿ ಈಗ ಇರುವ ಮೂರು ವರ್ಷದ ಬದಲಾಗಿ ನಾಲ್ಕು ವರ್ಷದ ಪದವಿ ಕೋರ್ಸನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಅದಕ್ಕೋಸ್ಕರ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ನೇಮಿಸಲಾಗಿದ್ದ ಕಾರ್ಯಪಡೆಯ ಪಠ್ಯಪುಸ್ತಕ ರಚನೆಯ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕನ್ನಡವನ್ನೂ ಒಳಗೊಂಡಂತೆ ಎಲ್ಲಾ ಭಾಷಾ ವಿಷಯಗಳನ್ನು ಕೇವಲ ಎರಡು ಸೆಮಿಸ್ಟರ್‌ಗಳಿಗೆ ಅಂದರೆ ಒಂದು ವರ್ಷಕ್ಕೆ ಮಾತ್ರ ಮಿತಿಗೊಳಿಸಿ ಶಿಫಾರಸ್ಸುಗಳನ್ನು ಮಾಡಿದೆ. ಈ ಶಿಫಾರಸ್ಸುಗಳು ‘ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿವೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶಗಳಲ್ಲಿ ದೇಶ ಭಾಷೆಗಳಿಗೆ ಪ್ರಾಮುಖ್ಯ ನೀಡಬೇಕು ಎಂಬ ಅಂಶವೂ ಇದೆ. ಆದರೆ ರಾಜ್ಯದ ಈ ಸಮಿತಿಯು ಕನ್ನಡದ ಪಾಲಿಗೆ ಮಹಾ ದ್ರೋಹವೆಸಗುವಂತಹ ಶಿಫಾರಸ್ಸುಗಳನ್ನು ಮಾಡಿದೆ ಎಂಬ ಆರೋಪಗಳನ್ನು ನಾಡಿನ ಹಿರಿಯರು ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಒಂದು ಸೆಮಿಸ್ಟರ್‌ನಲ್ಲಿ ಗರಿಷ್ಠವೆಂದರೆ 90 ದಿನಗಳ ಅವಧಿಯ ಬೋಧನೆ ಇರುತ್ತದೆ. ಪ್ರತಿ ವಿಷಯಕ್ಕೆ ಸಾಮಾನ್ಯವಾಗಿ ವಾರಕ್ಕೆ 4 ಗಂಟೆಯ ಅವಧಿಯಿರುತ್ತದೆ. ಒಂದು ಸೆಮಿಸ್ಟರ್‌ನಲ್ಲಿ ಒಂದು ವಿಷಯಕ್ಕೆ  48 ಗಂಟೆ ಬೋಧನಾ ಅವಧಿ ಇರುತ್ತದೆ. ಎರಡು ಸೆಮಿಸ್ಟರುಗಳಿಂದ ಗರಿಷ್ಠ 96 ಗಂಟೆಗಳು ಇರುತ್ತವೆ. ಕೇವಲ 96 ಗಂಟೆಗಳ ಅವಧಿಯಲ್ಲಿ ಯಾವ ವಿಷಯವನ್ನು ಕಲಿಸಲು ಸಾಧ್ಯ?

ವಿಜ್ಞಾನ, ವಾಣಿಜ್ಯ, ಅರ್ಥಶಾಸ್ತ್ರ, ಕಾನೂನು ಮತ್ತು ತಾಂತ್ರಿಕ ಶಿಕ್ಷಣವನ್ನು ಕಲಿಯುವ ವಿದ್ಯಾರ್ಥಿ ತನ್ನ ಕಲಿಕೆಯುದ್ದಕ್ಕೂ ಬೌದ್ಧಿಕತೆಯನ್ನು ರೂಪಿಸಿಕೊಳ್ಳುವುದರ ಜೊತೆಗೆ ಆರೋಗ್ಯಕರವಾದ ಮನಸ್ಸನ್ನೂ ಕಟ್ಟಿ ಕೊಳ್ಳಬೇಕಾಗುತ್ತದೆ. ಹೀಗಿರುವಾಗ ಸರ್ಕಾರವು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿದರೆ ಅವರು ಜಗತ್ತಿನ ಶ್ರೇಷ್ಠ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಮುಂತಾದವುಗಳನ್ನು ಕಲಿಯುವುದು ಹೇಗೆ?

ಕನ್ನಡದ ಶ್ರೇಷ್ಠ ಅಭಿವ್ಯಕ್ತಿಗಳಾದ ವಚನಗಳನ್ನು, ಪಂಪ, ರನ್ನ, ಕುಮಾರವ್ಯಾಸ ಮತ್ತು ಹರಿದಾಸರ ಕಾವ್ಯಗಳನ್ನು ಕಲಿಯುವುದು ಹೇಗೆ? ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮೇರು ಸಾಹಿತಿಗಳಾದ ಕುವೆಂಪು, ಕಾರಂತ ಬೇಂದ್ರೆ, ಮಾಸ್ತಿ, ಪುತಿನ ಮುಂತಾದವರು ರೂಪಿಸಿದ ಜೀವನೋತ್ಸಾಹದ ಬದುಕಿನ ದರ್ಶನಗಳನ್ನು ಮಕ್ಕಳು ಕಲಿಯುವುದು ಹೇಗೆ?

ದೇಶದ ಸಂಸ್ಕೃತಿ, ಭಾಷೆ,‌ ಮಹಾಕಾವ್ಯಗಳು, ಪುರಾಣಗಳು, ಕಲೆ, ಜನಪದ ಮುಂತಾದ ಪರಂಪರೆಗಳ ಬಗ್ಗೆ ಮಾತನಾಡುವ ಬಿಜೆಪಿಯು ಪದವಿ ಕಲಿಯುವ ನಮ್ಮ ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಕಲಿಯದಂತೆ ಮಾಡಿ ಕೇವಲ ಅದಾನಿ, ಅಂಬಾನಿಗಳಂಥ ಲೂಟಿಕೋರರ ಮಾದರಿಗಳನ್ನು ಕಲಿಸಲು ಹೊರಟಿದೆಯೆ  ಎಂಬ ಅನುಮಾನ ಮೂಡುತ್ತಿದೆ.

ನಮ್ಮ ದೇಶಕ್ಕೆ ಜ್ಞಾನ ಇರುವ, ದುಡ್ಡು ಇರುವ ಜನರ ಅಗತ್ಯ ಎಷ್ಟಿದೆಯೋ ಅದಕ್ಕಿಂತ ಹೆಚ್ಚು ಮಾನವೀಯ ಹೃದಯ ಇರುವ ಮನುಷ್ಯರ ಅಗತ್ಯವಿದೆ. ಅಂಥದ್ದಕ್ಕೆ ವಿರುದ್ಧವಾದ ನಿಲುವುಗಳನ್ನು ರೂಪಿಸುವುದಕ್ಕಾಗಿ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ಉಪಸಮಿತಿಯವರು ಭಾಷೆಗಳ ಕಲಿಕೆಯನ್ನು ಎರಡು ಸೆಮಿಸ್ಟರುಗಳಿಗೆ ಇಳಿಸಿದ್ದಾರೆ. ಸರ್ಕಾರ ಈ ಸಮಿತಿಯ ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದೆ ಆದರೆ ಅದು ಬಹಳ ದೊಡ್ಡ ಮಟ್ಟದ ಕನ್ನಡ ದ್ರೋಹವಾಗುತ್ತದೆ, ಸರಿಪಡಿಸಲಾಗದ ಜನದ್ರೋಹವಾಗುತ್ತದೆ.

ಪದವಿಯಲ್ಲಿ ಮಕ್ಕಳಿಗೆ ಭಾಷೆಯನ್ನು ಕಲಿಸುವಾಗ ವ್ಯಾಕರಣ, ಛಂದಸ್ಸುಗಳನ್ನು ಕಲಿಸುವುದಿಲ್ಲ. ಬದಲಾಗಿ ವಿದ್ಯಾರ್ಥಿಯ ಕೋರ್ಸಿಗೆ ಪೂರಕವಾದ ಪಠ್ಯವನ್ನೂ ಕಲಿಸಲಾಗುತ್ತದೆ. ಉದಾಹರಣೆಗೆ ವಿಜ್ಞಾನವನ್ನು ಕಲಿಯುವ ವಿದ್ಯಾರ್ಥಿಗಳು ಶಿವರಾಮ ಕಾರಂತರ, ಪೂರ್ಣಚಂದ್ರ ತೇಜಸ್ವಿಯವರ ಬರಹಗಳನ್ನು ಕಲಿಯುತ್ತಾರೆ. ಅದೇ ರೀತಿ ಗೆಲಿಲಿಯೋ, ಸ್ಟೀಫನ್ ಹಾಕಿಂಗ್, ಐನ್‌ಸ್ಟೆನ್, ಜಗದೀಶ್ ಚಂದ್ರ ಬೋಸ್, ಅಬ್ದುಲ್ ಕಲಾಂ ಮುಂತಾದವರ ಜೀವನದ ಸಾಧನೆಗಳನ್ನು, ಮಾದರಿಗಳನ್ನು ಮಾತೃಭಾಷೆಯಲ್ಲಿ ಕಲಿಯುತ್ತಾರೆ. ಹಾಗೆಯೇ ವಾಣಿಜ್ಯದ ವಿದ್ಯಾರ್ಥಿಗಳೂ ಸಹ ಯಶಸ್ವಿ ಸಂವಹನವನ್ನು ನಡೆಸುವುದು ಹೇಗೆ ಎಂಬುದನ್ನು ಕಲಿಯುತ್ತಾರೆ. ಹಾಗೂ ಉತ್ತಮ ಉದ್ಯಮಿ ಆಗುವುದರ ಜತೆಯಲ್ಲಿ ಉತ್ತಮ ಮನುಷ್ಯನಾಗುವುದು ಹೇಗೆ ಎಂಬುದನ್ನೂ ಕಲಿಯುತ್ತಾರೆ.

ಆದ್ದರಿಂದ 4 ವರ್ಷದ ಕೋರ್ಸಿಗೆ ಅನುಗುಣವಾಗಿ ಈಗ 3 ವರ್ಷಕ್ಕೆ ಅಥವಾ  ಆರು ಸೆಮಿಸ್ಟರುಗಳಿಗೆ ಭಾಷಾ ವಿಷಯವನ್ನು ಬೋಧಿಸಲು ಕ್ರಮ ತೆಗೆದುಕೊಳ್ಳಬೇಕು. ಹಾಗೆ ಮಾಡುವುದರಿಂದ ನಮ್ಮ ಮಕ್ಕಳು ಉತ್ತಮ ಪರಂಪರೆಗಳಿಗೆ ವಾರಸುದಾರರಾಗಲು ಸಾಧ್ಯವಾಗುತ್ತದೆ. ಹಾಗೂ ರಾಷ್ಟ್ರಕ್ಕೆ ಬೇಕಾದ ಉತ್ತಮ ಮನುಷ್ಯರು ರೂಪುಗೊಳ್ಳಲು ಸಹಾಯವಾಗುತ್ತದೆ.

ಅದರ ಬದಲಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ಸರ್ಕಾರ ಮುಂದಾಗುವುದಾದರೆ ಅದರ ವಿರುದ್ಧ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ. ಈ ನಾಡು ಎಂದಿಗೂ ನಾಡು, ನುಡಿಗೆ ದ್ರೋಹ ಎಸಗಿದವರನ್ನು ಕ್ಷಮಿಸಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ.  ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಕುಳಿತು ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಗಳನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. ಆರು ಸೆಮಿಸ್ಟರುಗಳಲ್ಲೂ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕೆಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDegree EducationKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddaramaiahState Newsಪದವಿ ಶಿಕ್ಷಣಬೆಂಗಳೂರುಸಿದ್ದರಾಮಯ್ಯ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕಾರಿ ವಲಯದಲ್ಲೇ ಕನ್ನಡ ವಿರೋಧಿ ನಿಲುವು: ಪ್ರಾಧಿಕಾರ ಅಧ್ಯಕ್ಷರ ಬೇಸರ

Next Post

ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ: ಶ್ರೀನಿವಾಸ ಉತ್ಸವ ಬಳಗದಿಂದ ಸಾರ್ಥಕ ಸೇವೆ…

kalpa News

kalpa News

Next Post
ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ: ಶ್ರೀನಿವಾಸ ಉತ್ಸವ ಬಳಗದಿಂದ ಸಾರ್ಥಕ ಸೇವೆ…

ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ: ಶ್ರೀನಿವಾಸ ಉತ್ಸವ ಬಳಗದಿಂದ ಸಾರ್ಥಕ ಸೇವೆ...

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL