ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಗುವನ್ನು ಕರೆದುಕೊಂಡು ಬಂದಿರುವ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಬಂಧನಕ್ಕೊಳಗಾದ ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ Sonu Shrinivasa Gowda ಪೊಲೀಸರ ಮುಂದೆ ಹೇಳಿದ್ದಾರೆ ಎಂದು ವರದಿಯಾಗಿದೆ.
ಇಂದು ಮುಂಜಾನೆ ಬಂಧನಕ್ಕೊಳಗಾದ ಸೋನು, ಪೊಲೀಸ್ ಠಾಣೆಯಲ್ಲಿ ಕಣ್ಣೀರು ಹಾಕಿದ್ದು, ಈ ವಿಚಾರದಲ್ಲಿ ನಾನು ಯಾವುದೇ ರೀತಿಯಲ್ಲೂ ಸಹ ತಪ್ಪು ಮಾಡಿಲ್ಲ ಎಂದಿದ್ದಾರೆ ಎನ್ನಲಾಗಿದೆ.

Also read: ಇಸ್ರೋ ಮತ್ತೊಂದು ಮೈಲಿಗಲ್ಲು | ಚಳ್ಳಕೆರೆ ಎಟಿಆರ್’ನಿಂದ `ಪುಷ್ಪಕ್’ ಲ್ಯಾಂಡಿಂಗ್ ಮಿಷನ್ ಸಕ್ಸಸ್
ನಾನು ಮಗು ಕರೆದುಕೊಂಡು ಬಂದು 15 ದಿನ ಆಗಿದೆ. ಹಾಗೆ ಕರೆದುಕೊಂಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ನಿಯಮದ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post