ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದಿದ್ದಾರೆ ಎಂಬ ಆರೋಪದಲ್ಲಿ ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋ ಅಭ್ಯರ್ಥಿಯಗಿದ್ದ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ Reals Star Sonu Shrinivas Gowda ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸೋನು ಅವರನ್ನು ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು ಆಕೆಯ ವಿರುದ್ಧ ಎಫ್’ಐಆರ್ ದಾಖಲಿಸಿದ್ದಾರೆ.

ಸೋನು ಶ್ರೀನಿವಾಸ್ ಗೌಡ ಅವರು ಇತ್ತೀಚೆಗೆ ಏಳು ವರ್ಷದ ಮಗುವೊಂದನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಕಾನೂನು ಪ್ರಕಾರ ದತ್ತು ಪಡೆದಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ. ಜೆಜೆ ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್’ಐಆರ್ ದಾಖಲಿಸಿಕೊಂಡು ಬಂಧಿಸಿದ್ದಾರೆ.
Also read: ಬದಲಿ ಗುಂಪಿನ ರಕ್ತ ಇಂಜೆಕ್ಟ್ | ಬಾಣಂತಿ ಸಾವು | ಮೂರು ಸಿಬ್ಬಂದಿಗಳ ಅಮಾನತು
ಸೋನು ಹೇಳಿಕೊಂಡಿದ್ದೇನು?
ನಾನು ಒಂದು ದಿನ ಅಪಾರ್ಟ್’ಮೆಂಟ್ ಕೆಳಗೆ ನಾಯಿಗೆ ಬಿಸ್ಕೆಟ್ ಹಾಕುವಾಗ ಇವಳು ಸಿಕ್ಕಿದ್ದಳು. ಅವಳಿಗೆ ಚಾಕೋಲೇಟ್ ಕೊಡಿಸಿದೆ. ನಂತರ ಅವಳ ಆಸೆಯಂತೆ ಶಾಪಿಂಗ್ ಕರೆದುಕೊಂಡು ಹೋದೆ. ಮನೆಗೆ ಕರೆದುಕೊಂಡು ಹೋಗಿ ಎಂದು ಕೇಳಿದಳು. ನಾನು ದತ್ತು ತೆಗೆದುಕೊಳ್ಳುವುದಕ್ಕೂ ಮೊದಲೇ ಅವಳಿಗೆ ಚೈನ್ ಕೊಡಿಸಿದ್ದೆ ಎಂದು ಹೇಳಿಕೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post