ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ನಟ ದರ್ಶನ್ #Darshan ಹಾಗೂ ಗ್ಯಾಂಗ್ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣ ಕುರಿತಂತೆ ತನಿಖೆ ಪೂರ್ಣಗೊಂಡಿದ್ದು, 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸುಮಾರು 4991 ಪುಟಗಳ ದೋಷಾರೋಪಣಾ ಪಟ್ಟಿಯಲ್ಲಿ ಇಂದು ಸಲ್ಲಿಕೆ ಮಾಡಿದ್ದಾರೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ದರ್ಶನ್ ಅವರನ್ನು 2ನೇ ಆರೋಪಿ ಎಂದೇ ದಾಖಲಿಸಲಾಗಿದೆ. ಪವಿತ್ರಾ 1ನೇ ಆರೋಪಿಯಾಗಿದ್ದಾರೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಒಟ್ಟು 3991 ಪುಟಗಳ ಭಾರೀ ದೋಷಾರೋಪ ಪಟ್ಟಿ ಇದಾಗಿದ್ದು, ಎಸ್’ಪಿಪಿ ಮೂಲಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ದೋಷಾರೋಪ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳಿವೆ ಎಂದು ತಿಳಿದುಬಂದಿದ್ದು, ಅದರೊಂದಿಗೆ ಎಫ್’ಐಆರ್’ನಲ್ಲಿ ಇರುವಂತೆಯೇ ಇದರಲ್ಲೂ ಸಹ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ಮೂರು ಮಂದಿ ಪ್ರತ್ಯಕ್ಷ ಸಾಕ್ಷಿದಾರರು ಪ್ರಕರಣದಲ್ಲಿದ್ದಾರೆ. 8 ಎಫ್’ಎಸ್’ಎಲ್-ಸಿಎಸ್’ಎಫ್’ಎಲ್ ವರದಿಗಳು ಚಾರ್ಜ್ ಶೀಟ್’ನಲ್ಲಿದೆ.
54 ಪಂಚರ ಸಕ್ಷಮ ಪೊಲೀಸರು ಮಹಜರು ಮಾಡಿದ್ದು, ಒಟ್ಟು 231 ಸಾಕ್ಷಿಗಳು ಪ್ರಕರಣದಲಿವೆ. 27 ಸಾಕ್ಷಿಗಳು ನ್ಯಾಯಾಧೀಶರ ಮುಂದೆ ತಮ್ಮ ಹೇಳಿಕೆಯನ್ನು ದಾಖಲು ಮಾಡಿದ್ದಾರೆ. ಒಟ್ಟು ಏಳು ಸಂಪುಟಗಳು ಒಟ್ಟು 10 ಕಡತಗಳಿರುವ ದೋಷಾರೋಪ ಪಟ್ಟಿ ಇದಾಗಿದೆ.
ಕೃತ್ಯಕ್ಕೆ ಬಳಸಿದ್ದ ಬಹುತೇಕ ವಸ್ತುಗಳನ್ನು ಪೊಲೀಸರು ಸೀಜ್ ಮಾಡಿದ್ದು, 28 ಸ್ಥಳದಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ. 17 ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವಾಹನಗಳು, ವಸ್ತುಗಳು, ಮೊಬೈಲ್, ಲಾಠಿ, ಮರದ ಪೀಸ್, ಸಿಸಿಟಿವಿ ದೃಶ್ಯವನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post