ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy Murder Case ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿರುವ ನಟ ದರ್ಶನ್ #Darshan ಮತ್ತು ನಾಲ್ವರು ಆರೋಪಿಗಳಿಗೆ 24ನೇ ಎಸಿಎಂಎಂ ಕೋರ್ಟ್ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
Also read: ಕಾರ್ಯಕರ್ತರ ತಳ ಹಂತದ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು: ಸಂಸದ ರಾಘವೇಂದ್ರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post