ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ, #Pavitra Gowda ಎ2 ನಟ ದರ್ಶನ್ #Darshan ಸೇರಿದಂತೆ ಎಲ್ಲ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ತಮ್ಮ ಕಾರಿನಲ್ಲಿ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಆಗಮಿಸಿದ ದರ್ಶನ್ ನ್ಯಾಯಾಧೀಶರ ಮುಂದೆ ಹಾಜರಾದರು. ಮುಂದಿನ ವಿಚಾರಣೆಯಲ್ಲಿ ಮಾರ್ಚ್ 8ಕ್ಕೆ ಮುಂದೂಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡುವಾಗ ವಿಧಿಸಿದ್ದ ಷರತ್ತಿನ ಪ್ರಕಾರ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಷರತ್ತು ವಿಧಿಸಲಾಗಿತ್ತು. ಇಂದು ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ.
ಆರೋಪಿಗಳ ಹಾಜರಾತಿ ಪಡೆದ ಕೋರ್ಟ್ ಏ.8 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಫೆ.25 ರಂದು ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು.
ಹೀಗಾಗಿ ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿ 17 ಮಂದಿ ಆರೋಪಿಗಳು ಸಿಸಿಹೆಚ್ ಕೋರ್ಟ್’ಗೆ ಹಾಜರಾಗಿದ್ದಾರೆ.
ನ್ಯಾಯಾಲಯಕ್ಕೆ ಹೋಗುವ ಮೊದಲು ತಮ್ಮ ಆರ್’ಆð ನಗರದ ನಿವಾಸದ ಬಳಿ ಬಂದ ಅಭಿಮಾನಿಗಳನ್ನು ಭೇಟಿ ಮಾಡಿ ಅನಂತರ ತಮ್ಮ ಕಾರಿನಲ್ಲಿ ದರ್ಶನ್ ಕೋರ್ಟ್’ಗೆ ಹೋಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post