ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾ ಸ್ವಾಮಿ ಕೊಲೆ #Renukaswamy Murder Case ಆರೋಪಿ ದರ್ಶನ್ #Darshan ಅವರಿಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆಗಳನ್ನು ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ.
ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು.

ಮತ್ತೊಬ್ಬ ಆರೋಪಿ ಪವಿತ್ರಾ ಅವರಿಗೂ ಇದೇ ಆದೇಶ ಅನ್ವಯ ಆಗಲಿದೆ. ಆದರೆ ದರ್ಶನ್ ಕೇಳಿದಂತೆ ದಿಂಬು, ಕನ್ನಡಿ, ಬಾಚಣಿಗೆ ಹಾಗೂ ಇನ್ನಿತರೆ ಸೌಲಭ್ಯಗಳು ಅವರಿಗೆ ಸಿಕ್ಕಿಲ್ಲ. ಈ ಹಿಂದೆ ದರ್ಶನ್ ಹಾಗೂ ಇತರೆ ಆರೋಪಿಗಳ ಜಾಮೀನು ರದ್ದು ಮಾಡಿದ್ದ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ವಿಶೇಷ ಸೌಲಭ್ಯ ನೀಡದಂತೆ ಸೂಚಿಸಿತ್ತು. ಅದರಂತೆ ಜೈಲಧಿಕಾರಿಗಳು ದರ್ಶನ್ಗೆ ಯಾವುದೇ ಸೌಲಭ್ಯಗಳನ್ನು ನೀಡಿರಲಿಲ್ಲ. ಹಾಗಾಗಿ ದರ್ಶನ್ ನ್ಯಾಯಾಲಯದ ಮೊರೆ ಹೋಗಿದ್ದರು.

ದರ್ಶನ್ ಅವರು ಈಗಿರುವ ಬ್ಯಾರಕ್ನಲ್ಲಿ ಬೆಳಕು ಬರುವುದಿಲ್ಲ. ಬಿಸಿಲು ಕಾಣದೆ ಫಂಗಸ್ ಆಗಿದೆ ಎಂದು ಆರೋಪಿಸಿದ್ದರು. ಆದರೆ ದರ್ಶನ್ ಭದ್ರತೆ ದೃಷ್ಟಿಯಿಂದ ಬೇರೆ ಬ್ಯಾರಕ್ಗೆ ಅವರನ್ನು ಸ್ಥಳಾಂತರ ಮಾಡಿಲ್ಲ ಎಂದು ಜೈಲಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು.
A1 ಪವಿತ್ರಾಗೌಡ, A2 ದರ್ಶನ್ ಸೇರಿ 6 ಆರೋಪಿಗಳು ಇಂದಿನ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಶೀಘ್ರ ಸಾಕ್ಷ್ಯ ವಿಚಾರಣೆ ಕೋರಿ ಪ್ರಾಸಿಕ್ಯೂಷನ್ ಹಾಕಲಾಗಿದ್ದ ಅರ್ಜಿಯ ಬಗ್ಗೆ, ಸಾಕ್ಷ್ಯ ವಿಚಾರಣೆಗೆ 2 ಕಡೆಯವರು ಸಹಕರಿಸುವಂತೆ ಕೋರ್ಟ್ ಸೂಚನೆ ನೀಡಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post