ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಟ ದರ್ಶನ್ #Actor Darshan ಹಾಗೂ ಗ್ಯಾಂಗ್’ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣಕ್ಕೆ #Remukaswamy Murder Case ಸಂಬಂಧಿಸಿದಂತೆ10 ದಿನಗಳಾದರೂ ಮೊಬೈಲ್ ಮಾತ್ರ ದೊರೆಯದೇ ಹುಡುಕಾಟ ಮುಂದುವರೆದಿದೆ.
ರೇಣುಕಾಸ್ವಾಮಿ ಶವ ಪತ್ತೆಯಾದ ರಾಜಕಾಲುವೆ ಜಾಗದಲ್ಲೇ ಕೊನೆಯ ಬಾರಿಗೆ ಸಿಗ್ನಲ್ ತೋರಿಸಿದ್ದು, ಈ ಪ್ರದೇಶದಲ್ಲಿ ಮೊಬೈಲ್ ಪತ್ತೆ ಕಾರ್ಯ ನಡೆದಿದೆ. ಅಲ್ಲದೇ ಮೊಬೈಲ್ ಪತ್ತೆಗಾಗಿ ಪೊಲೀಸರು ಆರೋಪಿಗಳನ್ನು ಮತ್ತೆ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಮೊಬೈಲ್ ಪ್ರಮುಖ ಸಾಕ್ಷಿಯಾಗುವ ಕಾರಣ ಪೊಲೀಸರು ಎಲ್ಲಾ ಕಡೆ ಆತನ ಮೊಬೈಲ್ ಹುಡುಕಾಡಿದ್ದಾರೆ. ಎಲ್ಲಿಯೂ ಮೊಬೈಲ್ ಸಿಗದ ಕಾರಣ ಪೊಲೀಸರು ಕೊನೆಯ ಬಾರಿಗೆ ಸಿಗ್ನಲ್ ಇದ್ದ ಜಾಗವನ್ನು ಸರ್ಚ್ ಮಾಡಿದ್ದಾರೆ. ರಾಜಕಾಲುವೆ ಜಾಗದಲ್ಲೇ ಕೊನೆಯ ಬಾರಿಗೆ ಸಿಗ್ನಲ್ ತೋರಿಸಿದೆ ಎಂದು ವರದಿಯಾಗಿದೆ.
Also read: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲು | ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಈ ಕಾರಣಕ್ಕೆ ಈಗ ಆರೋಪಿ ಪ್ರದೂಶ್ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾಟ್’ಮೆಂಟ್ ಮುಂಭಾಗದಲ್ಲಿರುವ ರಾಜಕಾಲುವೆ ಬಳಿ ಕರೆ ತಂದು ಶವ ಎಸೆದ ಜಾಗದತ್ತ ಕರೆತಂದಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್ ಹುಡುಕಾಡಿದ್ದಾರೆ. ಆದರೆ ಮೊಬೈಲ್ ಪತ್ತೆಯಾಗದ ಕಾರಣ ಶೋಧ ಕಾರ್ಯ ನಿಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ರೇಣುಕಾಸ್ವಾಮಿ ಮೊಬೈಲ್ ಪ್ರಮುಖ ಸಾಕ್ಷಿಯಾಗಿದೆ. ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಮೊಬೈಲ್’ನಲ್ಲೇ ಆರೋಪಿಗಳು ಕ್ಷಮೆಯ ವಿಡಿಯೋ ಮಾಡಿಸಿದ್ದರು ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post