ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ಬಂಧಿತರಾಗಿರುವ ನಟ ದರ್ಶನ್ #Darshan ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯು ಸೆಪ್ಟೆಂಬರ್ 30ರವರೆಗೂ ವಿಸ್ತರಣೆಯಾಗಿದೆ.
ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನಲೆಯಲ್ಲಿ ವಿವಿಧ ಕಾರಾಗೃಹಗಳಲ್ಲಿರುವ ಎಲ್ಲಾ ಆರೋಪಿಗಳನ್ನು ತಾವು ಇರುವ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಲಾಯಿತು.

Also read: ಮೂರು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮನೆಗೆ ಹೋಗುತ್ತದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಪೊಲೀಸರ ಮನವಿಗೆ ಒಪ್ಪಿಗೆ ಸೂಚಿಸಿದ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ ೩೦ ರವರೆಗೂ ಮುಂದೂಡಿ ಆದೇಶ ಹೊರಡಿಸಿದರು.

ಕೊಲೆ ಕೇಸ್ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ನ್ಯಾಯಾಲಯ ದರ್ಶನ್, ಪವಿತ್ರಗೌಡ #Pavithra Gowda ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೆಪ್ಟೆಂಬರ್ 12 ರವರೆಗೆ ಆ ಬಳಿಕ ಸೆಪ್ಟೆಂಬರ್ 17 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post