ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ನೌಕರರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಮಾಡಿದ್ದಾರೆ.
ಮಹಿಳಾ ನೌಕರರು ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಮುಜುಗರಕ್ಕೆ ಒಳಗಾಗುವ ಪರಿಸ್ಥಿತಿ ಇದ್ದು, ಕೆಲವು ಕಡೆ ಶೌಚಾಲಯಗಳಿಲ್ಲ. ಇದ್ದರೂ ಸುಸ್ಥಿತಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ನೌಕರರಿಗಾಗಿ ಪ್ರತ್ಯೇಕ ಸುಸಜ್ಜಿತ, ಸ್ವಚ್ಛ, ಸುರಕ್ಷಿತ ಶೌಚಾಲಯಗಳನ್ನು ನಿರ್ಮಿಸಲು ಸರ್ಕಾರದ ಎಲ್ಲಾ ಕಾರ್ಯದರ್ಶಿ, ಇಲಾಖಾ ಮುಖ್ಯಸ್ಥ ಹಾಗೂ ಜಿಲ್ಲಾಡಳಿತಕ್ಕೆ ಸೂಕ್ತ ನಿರ್ದೇಶನ ನೀಡಲು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post