ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಎರಡು ವರ್ಷಗಳ ಆಡಳಿತದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ.
ಮಧ್ಯಾಹ್ನ 12:30ರ ವೇಳೆಗೆ ರಾಜಭವನಕ್ಕೆ ತೆರಳಿದ ಅವರು, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದು, ನೂತನ ಮುಖ್ಯಮಂತ್ರಿ ಆಯ್ಕೆಯಾಗುವವರೆಗೂ ಹಂಗಾಮಿಯಾಗಿ ಮುಂದುವರೆಯಲು ರಾಜ್ಯಪಾಲರು ಸೂಚಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದ ಹೋರಾಟ ಹಾಗೂ ವರ್ಣರಂಜಿತ ವ್ಯಕ್ತಿತ್ವದ ಮುತ್ಸದ್ಧಿ ರಾಜಕಾರಣಿ, ಮುಂಚೂಣಿ ರಾಜಕೀಯದಿಂದ ನೇಪಥ್ಯಕ್ಕೆ ಸರಿದಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post