ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ರೆಕ್ಸ್ #Multiplex ಹಾಗೂ ಚಿತ್ರಮಂದಿರಗಳಿಗೆ #Theatre ಅಂಕುಶ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಪ್ರತಿ ಪ್ರದರ್ಶನದ ಟಿಕೇಟ್ ದರವನ್ನು ಗರಿಷ್ಠ 200 ರೂಗಳಿಗೆ ಸೀಮಿತಗೊಳಿಸಿದೆ.
ಈ ಕುರಿತಂತೆ ಬಜೆಟ್ #Budget ಭಾಷಣದಲ್ಲಿ ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ, #CM Siddaramaiah ಈ ಹಿಂದಿನಿAದಲೂ ಟಿಕೆಟ್ ದರ ನಿಗದಿ ಪಡಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಈಗ ಸರ್ಕಾರ 200 ರೂ. ದರ ನಿಗದಿ ಮಾಡಲು ಮುಂದಾಗಿದೆ ಎಂದಿದ್ದಾರೆ.
ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ಸಿನಿಮಾ ಕ್ಷೇತ್ರಕ್ಕೆ ಸರ್ಕಾರ ಒದಗಿಸಲಿದೆ ಎಂದಿದ್ದಾರೆ.
ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದಿದ್ದಾರೆ.
ಇನ್ನೂ ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಟಿ ವೇದಿಕೆಯನ್ನು ಸೃಷ್ಟಿಸಲು ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು, ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
Also read: ದೇವಾಲಯದ ಅರ್ಚಕರಿಗೆ ತಸ್ತಿತ್ ಮೊತ್ತ ಏರಿಕೆ | ವಸತಿ ಕೋಶ ಸ್ಥಾಪನೆಗೆ ನಿರ್ಧಾರ
ಜೊತೆಗೆ ಬೆಂಗಳೂರಿನ ನಂದಿನಿ ಲೇಔಟ್’ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಚಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಪತ್ರಕರ್ತರಿಗೆ `ಸಂಜೀವಿನಿ’ ಯೋಜನೆ
ರಾಜ್ಯದಲ್ಲಿ ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ `ಸಂಜೀವಿನಿ’ ಎಂಬ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಈ ಕುರಿತಂತೆ ಘೋಷಣೆ ಮಾಡಿರುವ ಅವರು, ರಾಜ್ಯದಲ್ಲಿ ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಮಾನ್ಯತೆ ಪಡೆದ ಪತ್ರಕರ್ತರಿಗೆ 5 ಲಕ್ಷ ರೂ.ವರೆಗಿನ ಉಚಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾಧ್ಯಮ ಮಾನ್ಯತೆ ಪಡೆದಿರುವ 2500 ಪತ್ರಕರ್ತರು ಹಾಗೂ ಅವರ ಕುಟುಂಬಸ್ಥರಿಗೆ ಈ ಉಚಿತ ಚಿಕಿತ್ಸೆ ಯೋಜನೆ ಅನ್ವಯವಾಗಲಿದೆ. ನಗದು ರಹಿತ ಚಿಕಿತ್ಸೆ ಇದಾಗಿದ್ದು, `ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಎಂಬ ಯೋಜನೆಯ ಅಡಿಯಲ್ಲಿ ಇದು ಜಾರಿಯಾಗಲಿದೆ.
ಅಲ್ಲದೇ, ಈವರೆಗೂ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುತ್ತಿರುವ ಮಾಶಾಸನವನ್ನು 12 ಸಾವಿರರಿಂದ 15 ಸಾವಿರಕ್ಕೆ ಹಾಗೂ ಕುಟುಂಬ ಮಾಶಾಸನವನ್ನು 6000ರಿಂದ 7500 ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post