ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ಉಪವಿಭಾಗದ ಪ್ರಮುಖ ಕಾಮಗಾರಿಗಳು ಹಾಗೂ ಸಿಗಂಧೂರು ಸೇತುವೆ ನಿರ್ಮಾಣ ಕಾಮಗಾರಿಗಳ ಉಸ್ತುವಾರಿ ಅಧಿಕಾರಿಯಾಗಿ ನಿವೃತ್ತ ಎಇಇ ಪೀರ್ ಪಾಷಾ ಅವರನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ಲೋಕೋಪಯೋಗಿ ಇಲಾಖೆ ಅಧೀನ ಕಾರ್ಯದರ್ಶಿ ಐ.ಎಸ್. ರುದ್ರಯ್ಯ ಅಧಿಸೂಚನೆ ಹೊರಡಿಸಿದ್ದಾರೆ.
ಶಿವಮೊಗ್ಗ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಹಾಗೂ ಸಿಗಂಧೂರು ಸೇತುವೆ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪೀರ್‌ಪಾಷಾ ಅವರನ್ನು ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನಿಯೋಜಿಸಲಾಗಿದೆ ಎಂದು ತಿಳಿಸಲಾಗಿದೆ.
ಸಿಗಂಧೂರು ಸೇತುವೆ ವಿನ್ಯಾಸ ಕೇಂದ್ರದ ಅನುಮೋದನೆ, ವನ್ಯಜೀವಿ ಸಂರಕ್ಷಣಾ ಪ್ರಾಧಿಕಾರದ ಅನುಮತಿ ಸೇರಿದಂತೆ ಸೇತುವೆ ಮಂಜೂರು ಮತ್ತು ಸೇತುವೆ ಕಾಮಗಾರಿ ವೇಗ ಪಡೆದುಕೊಳ್ಳುವಲ್ಲಿ ಪೀರ್‌ಪಾಷಾ ಅವರ ಪಾತ್ರ ಮಹತ್ವದ್ದಾಗಿದೆ. ಪ್ರಮುಖವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜೊತೆ ಕಾಮಗಾರಿಗಳ ಸಂಯೋಜನೆ, ದಾಖಲೆಗಳ ಸಿದ್ಧತೆ ಸೇರಿದಂತೆ ಪ್ರತೀ ಹಂತದಲ್ಲೂ ಮಹತ್ವದ ಪಾತ್ರ ವಹಿಸಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post