No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನೂತನ ತಂತ್ರಜ್ಞಾನಗಳ ಮೂಲಕ ಆಂಬ್ಯುಲೆನ್ಸ್ ಸೇವೆಯ ಪುನಶ್ಚೇತನ: ಸಚಿವ ಸುಧಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 19, 2022
in ಬೆಂಗಳೂರು ನಗರ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ – 108 ರ #108 Ambulance ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ #Minister Sudhakar ತಿಳಿಸಿದ್ದಾರೆ.

ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನುಗುಣವಾಗಿ ಆಂಬ್ಯುಲೆನ್ಸ್ ಸೇವೆಯನ್ನು ಉನ್ನತೀಕರಿಸುವ ಅಗತ್ಯತೆ ಕಂಡುಬಂದಿದೆ. ಹೀಗಾಗಿ ಹೊಸ ಮಾದರಿಯ ಆಂಬ್ಯುಲೆನ್ಸ್ ಸೇವೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆ, ಹೊಸ ಸುಧಾರಣಾ ಕ್ರಮಗಳನ್ನು ಆಂಬ್ಯುಲೆನ್ಸ್ ಸೇವೆಯಲ್ಲಿ ತರುವ ಉದ್ದೇಶವನ್ನು ಸರ್ಕಾರ ಹೊಂದಿದೆ.

Also read: ಚಳ್ಳಕೆರೆ: ಅಕ್ರಮ ಗಾಂಜಾ ಸಾಗಾಣಿಕೆ – ಮೂವರ ಬಂಧನ

ಹಲವು ಸಂದರ್ಭಗಳಲ್ಲಿ ರೋಗಿಯ ಜೀವ ಉಳಿಸಲು “ಗೋಲ್ಡನ್ ಅವರ್” #Golden hour ತುಂಬಾ ಮಹತ್ವದ್ದಾಗಿರುತ್ತದೆ. ಈ ಅವಧಿಯಲ್ಲಿ ವ್ಯಕ್ತಿಗೆ ಸರಿಯಾದ ಚಿಕಿತ್ಸೆ ನೀಡಿದರೆ ಆತನ/ಆಕೆಯ ಜೀವ ಉಳಿಯುತ್ತದೆ. ಇಂತಹ ಸೇವೆಯನ್ನು ಸಕಾಲಕ್ಕೆ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಆಂಬ್ಯುಲೆನ್ಸ್ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಸರ್ಕಾರ ಮುನ್ನುಡಿ ಬರೆದಿದೆ.

ಸರ್ಕಾರ ಆರೋಗ್ಯ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಆರೋಗ್ಯ ವಲಯವನ್ನು ಎಲ್ಲಾ ಆಯಾಮಗಳಿಂದ ಅಭಿವೃದ್ಧಿಪಡಿಸುವ ಮಹತ್ವಕಾಂಕ್ಷೆ ಹೊಂದಿದೆ. ಈ ಹಿನ್ನೆಲೆಯಲ್ಲಿ, ತುರ್ತು ಆರೋಗ್ಯ ಸೇವೆಗೆ ಹೆಚ್ಚು ಆದ್ಯತೆ ನೀಡಿದ್ದು, ಈಗಾಗಲೇ ತಜ್ಞರ ಸಲಹಾ ಸಮಿತಿ ಹಾಗೂ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆಗಳನ್ನು ನಡೆಸಿತ್ತು. ಆ ಬಳಿಕ ಹೊಸ ತಂತ್ರಜ್ಞಾನದ ಬಳಕೆ ಮತ್ತು ಆಂಬ್ಯುಲೆನ್ಸ್ ಆಧುನಿಕರಣಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Also read: ದುಸ್ಥಿತಿಯತ್ತ ತೀರ್ಥಹಳ್ಳಿ ತೂಗುಸೇತುವೆ, ನಿಷೇಧವಿದ್ದರೂ ವಾಹನ ಸಂಚಾರ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಿ

750 ಆಂಬ್ಯುಲೆನ್ಸ್ ಗಳು:

ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಪ್ರಕಾರ, ಒಂದು ಲಕ್ಷ ಜನಸಂಖ್ಯೆಗೆ ಒಂದು ಬೇಸಿಕ್ ಲೈಫ್ ಸಪೋರ್ಟ್ #Basic Live Support (ಬಿ.ಎಲ್.ಎಸ್.) ಆಂಬ್ಯುಲೆನ್ಸ್ ಮತ್ತು ಪ್ರತಿ 5 ಲಕ್ಷ ಜನಸಂಖ್ಯೆಗೆ ಒಂದು ಅಡ್ವಾನ್ಸ್ಡ್ ಲೈಫ್ ಸರ್ಪೋಟ್ #Avance Live Support (ಎ.ಎಲ್.ಎಸ್) ಆಂಬ್ಯುಲೆನ್ಸ್ ಇರಬೇಕು. ಒಂದು ಆಂಬ್ಯುಲೆನ್ಸ್ 24 ಗಂಟೆಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಪ್ರಕರಣಗಳನ್ನು ನಿರ್ವಹಣೆ ಮಾಡಿದರೆ ಮತ್ತು 120 ಕಿ.ಮೀ. ಗಿಂತ ಹೆಚ್ಚು ದೂರ ಕ್ರಮಿಸಿದರೆ, ಅಂತಹ ಕಡೆ ಮತ್ತೊಂದು ಆಂಬ್ಯುಲೆನ್ಸ್ ಒದಗಿಸಬೇಕಾಗುತ್ತದೆ. ಈ ಮಾರ್ಗಸೂಚಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರುವ ಮಹತ್ವಕಾಂಕ್ಷೆ ಸರ್ಕಾರಕ್ಕಿದೆ. ಹೀಗಾಗಿ ಆಂಬ್ಯುಲೆನ್ಸ್ ಸಂಖ್ಯೆಯನ್ನು ಪ್ರಸ್ತುತದ 710 ರಿಂದ 750 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಪೈಕಿ, 40% ಎ.ಎಲ್.ಎಸ್ ಮತ್ತು 60% ಬಿ.ಎಲ್.ಎಸ್.ಆಗಿರಲಿವೆ. ಸರ್ಕಾರ ಹೊಸದಾಗಿ 380 ಆಂಬ್ಯುಲೆನ್ಸ್ ಗಳನ್ನು ಖರೀದಿ ಮಾಡಲಿದೆ. ಈ ಪೈಕಿ, 340 ಆಂಬ್ಯುಲೆನ್ಸ್ ಗಳು ಹಳೆಯ ಆಂಬ್ಯುಲೆನ್ಸ್ ಗಳ ಬದಲಿಯಾಗಿ ಬರಲಿವೆ. ಉಳಿದ 40 ಹೊಸ ಆಂಬ್ಯುಲೆನ್ಸ್ ಗಳಾಗಿರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Also read: ಎಲ್ಲಾ ರೈತರಿಗೆ ಫಸಲ್ ಬಿಮಾ ಯೋಜನೆ ಲಾಭ ದೊರೆಯಲು ಕ್ರಮ ಕೈಗೊಳ್ಳಿ: ಸಚಿವ ನಾರಾಯಣ ಗೌಡ

ಕರೆ ಕೇಂದ್ರದ ಉನ್ನತೀಕರಣ:

ಆಂಬ್ಯುಲೆನ್ಸ್ ಸೇವೆಯಲ್ಲಿ ಕರೆ ಕೇಂದ್ರ ಅಥವಾ ಕಮಾಂಡ್ ಸೆಂಟರ್ ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ನಡುವೆ ಸೇತುವೆಯಂತೆ ಕೆಲಸ ಮಾಡುವ ಈ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕಾಲ್ ಸೆಂಟರ್ ನ ಸೀಟುಗಳ ಸಂಖ್ಯೆಯನ್ನು 54 ರಿಂದ 75 ಕ್ಕೆ ಏರಿಸಲಾಗುತ್ತದೆ. ಈ ಕಮಾಂಡ್ ಸೆಂಟರ್, ಆಂಬ್ಯುಲೆನ್ಸ್ ನ ಜಿಪಿಎಸ್ ಟ್ರ್ಯಾಕಿಂಗ್, ಸಿಬ್ಬಂದಿಯ ಬಯೋಮೆಟ್ರಿಕ್ ಹಾಜರಾತಿ, ಆಂಬ್ಯುಲೆನ್ಸ್ ಸೇವೆಯ ಲೈವ್ ಸ್ಟ್ರೀಮಿಂಗ್, ಆನ್ ಲೈನ್ ಮಾನವ ಸಂಪನ್ಮೂಲ ನಿರ್ವಹಣೆ, ರೋಗಿಗಳ ಆರೈಕೆಯ ಎಲೆಕ್ಟ್ರಾನಿಕ್ ದಾಖಲೆಗಳ ನಿರ್ವಹಣೆ, ಅಹವಾಲು ಸ್ವೀಕಾರ ಮೊದಲಾದ ಹೊಸ ಸೌಲಭ್ಯ ಹೊಂದಲಿದೆ.

ಹೊಸ ವ್ಯವಸ್ಥೆ:

ಹಿಂದೆ ಆಂಬ್ಯುಲೆನ್ಸ್ ನಿರ್ವಹಣೆ ಮಾಡುವ ಏಜೆನ್ಸಿಯನ್ನು ದರದ ಆಧಾರದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಈಗ ದರ ಹಾಗೂ ಗುಣಮಟ್ಟದ ಕಾರ್ಯನಿರ್ವಹಣೆಯನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗಿದೆ. ಯಾವುದೇ ಸರ್ಕಾರಕ್ಕೆ 6 ವರ್ಷಗಳ ಕಾಲ 100 ಸೀಟುಗಳ ಕಾಲ್ ಸೆಂಟರ್ ಸೇವೆ ಒದಗಿಸಿರುವುದು, ಯಾವುದೇ ಸರ್ಕಾರಕ್ಕೆ 500 ಆಂಬ್ಯುಲೆನ್ಸ್ ಗಳ ಸೇವೆ ನೀಡಿರುವುದು ಸೇರಿದಂತೆ ಹಲವು ನಿಗದಿತ ಷರತ್ತುಗಳನ್ನು ಹೊಸ ಟೆಂಡರ್ ನಲ್ಲಿ ವಿಧಿಸಲಾಗುತ್ತಿದೆ. ಅಲ್ಲದೆ, ಸೇವೆ ನೀಡುವ ಏಜೆನ್ಸಿಯವರು, ತಂತ್ರಜ್ಞಾನವನ್ನು ಬಳಸಿ ಆಸ್ಪತ್ರೆಗಳನ್ನು ಮ್ಯಾಪ್ ಮಾಡಿರಬೇಕು. ಆಂಬ್ಯುಲೆನ್ಸ್ ಸೇವೆ ನೀಡುವಾಗ ಅತಿ ಸಮೀಪದ ಆಸ್ಪತ್ರೆಯು ಸ್ವಯಂಚಾಲಿತವಾಗಿ ಆಯ್ಕೆಯಾಗುವಂತಹ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸಲಾಗುತ್ತದೆ. ಇದರಿಂದ ಸೇವೆಯ ಗುಣಮಟ್ಟದಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews KannadaState Newsಬೆಂಗಳೂರುಸಚಿವ ಸುಧಾಕರ್
Share197Tweet123Send
Previous Post

ಚಳ್ಳಕೆರೆ: ಅಕ್ರಮ ಗಾಂಜಾ ಸಾಗಾಣಿಕೆ – ಮೂವರ ಬಂಧನ

Next Post

ತಡರಾತ್ರಿ ಶಿವಮೊಗ್ಗದಲ್ಲಿ ಇಬ್ಬರ ಭೀಕರ ಹತ್ಯೆ: ಘಟನೆ ನಡೆದಿದ್ದೆಲ್ಲಿ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಜಗಳ ಬಿಡಿಸಲು ಹೋದ ಯುವಕನಿಗೆ ಚಾಕು ಇರಿತ, ಇಬ್ಬರಿಗೆ ಗಾಯ

ತಡರಾತ್ರಿ ಶಿವಮೊಗ್ಗದಲ್ಲಿ ಇಬ್ಬರ ಭೀಕರ ಹತ್ಯೆ: ಘಟನೆ ನಡೆದಿದ್ದೆಲ್ಲಿ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ಫೆ.7, 8 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಏ.4, 5ರಂದು ಶಿವಮೊಗ್ಗ ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

April 3, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

ಶಿಕಾರಿಪುರ | ಸಂಭ್ರಮದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಹರಿದು ಬಂದ ಜನಸಾಗರ

April 3, 2026
ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

April 3, 2026
2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL