ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಖಾಸಗೀ ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಬಾಗಲೂರಿನ ಖಾಸಗಿ ಕಾಲೇಜೊಂದರದಲ್ಲಿ ಘಟನೆ ನಡೆದಿದ್ದು, ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ ಗುಜರಾತ್ ಮೂಲದ ಭಾಸ್ಕರ್ ಎಂಬ ವಿದ್ಯಾರ್ಥಿ(22) ಮೃತ ದುರ್ದೈವಿ ಎಂದು ವರದಿಯಾಗಿದೆ.
ಕಾಲೇಜು ಫೆಸ್ಟ್ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ವಿರೋಧಿ ಗುಂಪು ಭಾಸ್ಕರ್’ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದೆ.
Also read: ಬೆನ್ನಮೇಲೆ ಕಪ್ಪೆ ಚಿಪ್ಪಿನ ರೀತಿಯ ಚರ್ಮ ಹೊಂದಿದ ಮಗು
ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post