ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ರಾಜ್ಯದ ಖ್ಯಾತ ಚಲನಚಿತ್ರ ನಟರು ಹಾಗೂ ಹಿರಿಯ ಕ್ರೀಡಾ ಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಔತಣಕೂಟ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಏರ್ ಶೋನಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿಯವರು ನಿನ್ನೆ ರಾಜಭವನದಲ್ಲಿ ತಂಗಿದ್ದರು. ಈ ವೇಳೆ ನಿನ್ನೆ ರಾತ್ರಿಯ ಔತಣಕೂಟಕ್ಕೆ ಹಲವು ಗಣ್ಯರನ್ನು ಪ್ರಧಾನಿ ಕಚೇರಿಯಿಂದ ಆಹ್ವಾನಿಸಲಾಗಿತ್ತು. ಆದರೆ, ಈ ಔತಣಕೂಟದಲ್ಲಿ ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಸಂಜೆಯರೆಗೂ ಸಹ ರಾಜ್ಯ ಸರ್ಕಾರಕ್ಕೂ ತಿಳಿದಿರಲಿಲ್ಲ. ಆ ಮಟ್ಟಿನ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು.
ಇನ್ನು, ಡಿನ್ನರ್ ಪಾರ್ಟಿಯಲ್ಲಿ ನಟ ಯಶ್, Actor Yash ನಟ- ನಿರ್ದೇಶಕ ರಿಷಬ್ ಶೆಟ್ಟಿ, Rishab Shetty ಅಶ್ವಿನಿ ಪುನೀತ್ ರಾಜಕುಮಾರ್, Ashwini Puneeth Rajkumar ನಿರ್ಮಾಪಕ ವಿಜಯ್ ಕಿರಗಂದೂರು, Vijay Kirgandur ಶ್ರದ್ದಾ ಜೈನ್ Shradha ಅವರುಗಳು ಪಾಲ್ಗೊಂಡಿದ್ದರು.
ಈ ವೇಳೆ ಚರ್ಚೆ ನಡೆಸಿದ ಪ್ರಧಾನಿಯವರು, ಕನ್ನಡ ಚಿತ್ರೋದ್ಯಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೆಚ್ಚುಗೆಯನ್ನೂ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನ್ನಡ ಚಿತ್ರೋದ್ಯಮವು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಾಡಿಹೊಗಳಿದ್ದಾರೆ. ದೇಶ ವಿದೇಶಗಳಿಗೆ ನಮ್ಮ ಪರಂಪರೆಯನ್ನು ಕನ್ನಡ ಚಿತ್ರರಂಗದ ಮೂಲಕ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆ ವ್ಯಕ್ತ ಪಡಿಸಿದ್ದಾರೆ. ಕನ್ನಡ ಚಿತ್ರೋದ್ಯಮದ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ಹೇಳಿದ್ದಾರೆ.
Also read: ಎಲ್’ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ
ಅಶ್ವಿನಿ ಪುನೀತ್ ರಾಜ್‌ಕುಮಾರ್ ಜೊತೆ ಕೆಲ ಸಮಯ ಮಾತನಾಡಿದ ಪ್ರಧಾನಿ, ಪುನೀತ್ ಅವರು ಈ ನಾಡಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದು, ಪುನೀತ್ ಅವರ ಸೇವೆಯನ್ನು ಈ ದೇಶ ಯಾವತ್ತೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post