ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾರು ಕೆಟ್ಟು ನಿಂತ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ಕಾಯುತ್ತಿದ್ದ ದಂಪತಿಯನ್ನು ಸ್ಕೂಟರ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಚಾಕು ತೋರಿಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು-ಮೈಸೂರು ಹೊಸ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.
ಸೋಮವಾರ ನಸುಕಿನ 1.50 ರ ಸುಮಾರಿಗೆ ವೈದ್ಯಕೀಯ ಪ್ರತಿನಿಧಿ ಲೋಹಿತ್ ರಾವ್ ಮತ್ತು ಅವರ ಪತ್ನಿ ತಮ್ಮ ಸ್ನೇಹಿತರೊಬ್ಬರನ್ನು ನಾಯಂಡಹಳ್ಳಿಗೆ ಬಿಡಲು ಬೆಂಗಳೂರಿಗೆ ಬಂದಿದ್ದರು. ಮೈಸೂರಿಗೆ ವಾಪಸಾಗುವಾಗ ತಾಂತ್ರಿಕ ಸಮಸ್ಯೆಯಿಂದ ಕಾರು ಕೆಟ್ಟು ನಿಂತಿತು. ಅಲ್ಲಿಗೆ ಆಗಮಿಸಿದ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ಮತ್ತು 2.5 ಲಕ್ಷಕ್ಕೂ ಹೆಚ್ಚು ನಗದು ದೋಚಿದ್ದಾರೆ ಎನ್ನಲಾಗಿದೆ.
ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಚನ್ನಪಟ್ಟಣ ಬಳಿ ಘಟನೆ ನಡೆದಿದೆ.
Also read: ಅಡ್ಡಾದಿಡ್ಡಿ ಕಾರು ಚಾಲನೆಗೆ ಇಬ್ಬರು ಯುವಕರು ಬಲಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post