ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ #Actor Darshan ವಿರುದ್ಧ ರೌಡಿ ಶೀಟ್ ಓಪನ್ ಮಾಡುವ ಕುರಿತಾಗಿ ಪೊಲೀಸರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ #Dr. G. Parameshwar ಹೇಳಿದ್ದಾರೆ.
ಪ್ರಕರಣ ಕುರಿತಂತೆ ಮಾತನಾಡಿರುವ ಅವರು, ದರ್ಶನ್ ಅವರ ವಿರುದ್ಧದ ಹಿಂದಿನ ಪ್ರಕರಣಗಳನ್ನು ಪರಿಶೀಲಿಸಿ ಅವರ ವಿರುದ್ಧ ರೌಡಿ ಶೀಟ್ ಓಪನ್ ಮಾಡುವ ವಿಚಾರದಲ್ಲಿ ಪೊಲೀಸರೇ ನಿರ್ಧಾರ ಕೈಗೊಳ್ಳುತ್ತಾರೆ. ನಾವು ಆ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದೇವೆ ಎಂದಿದ್ದಾರೆ.
Also read: ನಟ ದರ್ಶನ್’ಗೆ ಮತ್ತೊಂದು ಕಾನೂನು ಸಂಕಷ್ಟ | ಇನ್ನೊಂದು ಎಫ್’ಐಆರ್ | ಏನದು ಪ್ರಕರಣ?
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಆರೋಪಿಗಳನ್ನು ಬಂಧಿಸಿ, ಎಫ್’ಐಆರ್ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಒಂದು ವಾರ ಎಲ್ಲರನ್ನೂ ಪೊಲೀಸ್ ಕಸ್ಟಡಿಗೆ ವಹಿಸಿಲಾಗಿದೆ. ಇನ್ನೊಂದೆಡೆ ತನಿಖೆಯನ್ನು ಅಧಿಕಾರಿಗಳು ತೀವ್ರಗೊಳಿಸಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಯಾರು ಹಾಗೂ ಯಾತಕ್ಕಾಗಿ ಕೊಲೆ ಮಾಡಿದ್ದಾರೆ ಎಂದು ತನಿಖೆಯಿಂದ ಹೊರಬರಲಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅವಶ್ಯಕತೆಯಿಲ್ಲ. ತನಿಖೆ ಮುಗಿದು ಪೊಲೀಸ್ ಅಧಿಕಾರಿಗಳಿಂದ ಏನು ಶಿಫಾರಸ್ಸು ಬರುತ್ತದೆ ನೋಡೋಣ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post