ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ #Renukaswamymurder ಆರೋಪಿ ಎ2 ದರ್ಶನ್’ಗೆ #Darshan ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಚಾರ ತಿಳಿದು ಕೆಂಡಾಮಂಡಲರಾಗಿರುವ ಸಿಎಂ ಸಿದ್ದರಾಮಯ್ಯ, #CM Siddaramaiah ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ರಾಜಾತಿಥ್ಯ ವಿಚಾರ ಹೊರಬಿದ್ದ ಬೆನ್ನಲ್ಲೇ ಕೆಂಡಾಮಂಡಲರಾಗಿರುವ ಸಿದ್ದರಾಮಯ್ಯ, ಈ ಕೃತ್ಯ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ರಾಜಾತಿಥ್ಯ ನೀಡಿರುವ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚನೆ ನೀಡಿರುವ ಅವರು, ಘಟನೆ ಕುರಿತಂತೆ ವರದಿ ನೀಡುವಂತೆ ಆದೇಶಿಸಿದ್ದಾರೆ.
Also read: ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ | ಪರಪ್ಪನ ಅಗ್ರಹಾರದ 7 ಮಂದಿ ಅಮಾನತು
ಇನ್ನು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದರ್ಶನ್ ಸೇರಿ ಪ್ರಕರಣಕ್ಕೆ ಸಂಬAಧಿಸಿದ ಎಲ್ಲರನ್ನೂ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ.
ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ರಾಜ್ಯ ಪೊಲೀಸ್ ಮಹಾ ಆಯುಕ್ತ ಡಾ. ಅಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ದರ್ಶನ್ ಪೋಟೋ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಜೈಲಿನಲ್ಲಿರುವ ಸಿಸಿ ಕ್ಯಾಮೇರಾ ಹಾಗೂ ಸ್ಥಳ ಪರೀಶಿಲನೆ ಮಾಡಿದ್ದಾರೆ.
ದರ್ಶನ್ ಹಾಗೂ ವಿಲ್ಸನ್ ಗಾರ್ಡನ್ ನಾಗ ಓಡಾಟದ ಬಗ್ಗೆ ಪರೀಶಿಲನೆ ನಡೆಸಲಾಗಿದೆ. ಯಾವ್ಯಾವ ಸ್ಥಳದಲ್ಲಿ ಓಡಾಟ ಸಿಗರೇಟ್ ಸೇವನೆ ದೃಶ್ಯದ ಬಗ್ಗೆ ಸಿಸಿಟಿವಿಯಲ್ಲಿ ಸೆರೆಯಾಗಿರುವ ಬಗ್ಗೆ ಪರೀಶಿಲನೆ ಮಾಡಲಾಗಿದೆ. ಜೈಲಿನಲ್ಲಿರುವ ಪ್ರತಿ ಸಿಸಿ ಕ್ಯಾಮರೆಗಳನ್ನು ಅಧಿಕಾರಿಗಳು ಪರಿಶೀಲಿಸಿಸುತ್ತಿದ್ದಾರೆ.
ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿದ್ದರೆ. ಅವರು ಜೈಲಿನಲ್ಲಿ ಸೊರಗಿ ಹೋಗಿದ್ದರೆ ಎಂದೆಲ್ಲ ಹೇಳಲಾಗಿತ್ತು. ಅವರನ್ನು ನೋಡಿಬಂದ ಅನೇಕರು ಕಣ್ಣೀರು ಹಾಕಿದ್ದರು. ಇದೆಲ್ಲವೂ ಸುಳ್ಳು ಅನ್ನೋದು ವೈರಲ್ ಆದ ಪೋಟೋದಲ್ಲಿ ಸ್ಪಷ್ಟವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post