ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
ರಾಜ್ಯದ ನಗರಗಳ ಹೊರ ವಲಯಗಳಲ್ಲಿ ಲಾರಿ, ಟ್ರಕ್‌ಗಳ ನಿರ್ವಹಣೆದಾರರಿಗೆ ತಂಗುದಾಣ, ಸರಕುಗಳನ್ನು ಏರಿಳಿಸುವ ವ್ಯವಸ್ಥೆ ಒದಗಿಸುವ ಹಾಗೂ ವಾಹನ ದಟ್ಟಣೆ, ಅಪಘಾತಗಳು, ರಸ್ತೆಗಳಿಗೆ ಆಗುವ ಹಾನಿ ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುವುದು ಎಂದು ಡಿ. ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅವರು ತಿಳಿಸಿದರು.
ದೇವನಹಳ್ಳಿಯ, ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕಂದಾಯ ಹಾಗೂ ಕೆ.ಐ.ಎ.ಡಿ.ಬಿ. ಅಧಿಕಾರಿಗಳ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಬೆಂಗಳೂರು ಗ್ರಾಮಾಂತರದಲ್ಲಿ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಿದ್ದು ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಇದಕ್ಕಾಗಿ ಜಿಲ್ಲೆಯಲ್ಲೂ ಟರ್ಮಿನಲ್ಸ್ ಸ್ಥಾಪನೆ ಸ್ಥಳಾವಕಾಶಕ್ಕಾಗಿ ಜಿಲ್ಲಾಧಿಕಾರಿಗಳ ಮೂಲಕ ತಹಶೀಲ್ದಾರ್‌ಗಳಿಗೆ ಮಾಹಿತಿ ನೀಡಲಾಗಿದ್ದು ಆದಷ್ಟು ಬೇಗ ಅಗತ್ಯವಿರುವ ಸ್ಥಳಾವಕಾಶ ಒದಗಿಸುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ರಾಜ್ಯದಾದ್ಯಂತ ಲಾರಿ, ಟ್ರಕ್ ನಿರ್ವಹಣೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್ಸ್ ನಿರ್ಮಿಸಲು, ಸರ್ಕಾರಿ ಜಮೀನು ಗುರುತಿಸಿ ಸಂಸ್ಥೆಗೆ ಹಂಚಿಕೆ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಭೂಲಭ್ಯತೆಯ ಹಾಗೂ ಅನುದಾನ ಲಭ್ಯತೆಯ ಆಧಾರದ ಮೇಲೆ ಯೋಜನೆಗಳನ್ನು ಕೈಗೊಳ್ಳಲಾಗುವಿದು. ಪಿಪಿಟಿ ಮಾದರಿಯಲ್ಲೂ ಆರಂಭಿಸುವ ಚಿಂತನೆಯಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಸ್ಥಳಾವಕಾಶ ಗುರುತಿಸಲು ಜಿಲ್ಲಾಧಿಕಾರಿಯವರಿಗೆ ತಿಳಿಸಲಾಗಿದೆ. ಜಿಲ್ಲೆಯಲ್ಲೂ ಶೀಘ್ರವಾಗಿ ಟರ್ಮಿನಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.

ಸಭೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಅಪರ ಜಿಲ್ಲಾಧಿಕಾರಿ ವಿಜಯ, ಈ. ರವಿಕುಮಾರ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್ ಸೇರಿದಂತೆ ತಹಶಿಲ್ದಾರ್‌ಗಳು, ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಉಪಸ್ಥಿತರಿದ್ದರು.










Discussion about this post