No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂ. ಗ್ರಾಮಾಂತರ

ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ

ಡಿ. ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಲಿಮಿಟೆಡ್‌ನ ಅಧ್ಯಕ್ಷ ಡಿ.ಎಸ್. ವೀರಯ್ಯ ಮಾಹಿತಿ

kalpa News by kalpa News
February 9, 2023
in ಬೆಂ. ಗ್ರಾಮಾಂತರ
0
ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು ಗ್ರಾಮಾಂತರ  |

ರಾಜ್ಯದ ನಗರಗಳ ಹೊರ ವಲಯಗಳಲ್ಲಿ ಲಾರಿ, ಟ್ರಕ್‌ಗಳ ನಿರ್ವಹಣೆದಾರರಿಗೆ ತಂಗುದಾಣ, ಸರಕುಗಳನ್ನು ಏರಿಳಿಸುವ ವ್ಯವಸ್ಥೆ ಒದಗಿಸುವ ಹಾಗೂ ವಾಹನ ದಟ್ಟಣೆ, ಅಪಘಾತಗಳು, ರಸ್ತೆಗಳಿಗೆ ಆಗುವ ಹಾನಿ ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುವುದು ಎಂದು ಡಿ. ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅವರು ತಿಳಿಸಿದರು.

ದೇವನಹಳ್ಳಿಯ, ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕಂದಾಯ ಹಾಗೂ ಕೆ.ಐ.ಎ.ಡಿ.ಬಿ. ಅಧಿಕಾರಿಗಳ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಲಾರಿ, ಟ್ರಕ್ ಚಾಲಕರಿಗೆ, ನಿರ್ವಾಹಕರಿಗೆ ಮೂಲಭೂತ ಸೌಕರ್ಯಗಳಾದ ತಂಗುದಾಣ, ಶೌಚಾಲಯ ಕೊರತೆಯಿದೆ. ಇದನ್ನು ನೀಗಿಸಲು ರಾಜ್ಯದ 31 ಜಿಲ್ಲೆಗಳಲ್ಲೂ ಟರ್ಮಿನಲ್ ನಿರ್ಮಿಸಲಾಗುತ್ತದೆ. ಈಗಾಗಲೇ ರಾಜ್ಯದ ಮೈಸೂರು ಹಾಗೂ ಧಾರವಾಡದಲ್ಲಿ ಟರ್ಮಿನಲ್ ನಿರ್ಮಿಸಲಾಗಿದ್ದು ಟ್ರಕ್, ಲಾರಿ ನಿಲುಗಡೆಗೆ ಮತ್ತು ಇತರ ಮೂಲ ಸೌಲಭ್ಯಗಳಿಗೆ ವ್ಯವಸ್ಥೆ ಕಲ್ಲಿಸಲಾಗಿದೆ. ಬೆಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ಕಾಮಗಾರಿ ಪೂರ್ಣಗೊಂಡಿದ್ದು, ಸರಕು ಸಾಗಾಣಿಕೆ ನಿರ್ವಹಣೆದಾರರ ಬಳಕೆಗೆ ನೀಡಲಾಗುವುದು. ಹೊಸಪೇಟೆಯಲ್ಲಿ ಟರ್ಮಿನಲ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಹಾಗೂ ಹುಬ್ಬಳ್ಳಿ, ದಾಂಡೇಲಿಯಲ್ಲಿ ಜಮೀನು ಹಂಚಿಕೆಯಾಗಿದ್ದು ಟರ್ಮಿನಲ್ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಬೆಂಗಳೂರು ಗ್ರಾಮಾಂತರದಲ್ಲಿ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಿದ್ದು ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಇದಕ್ಕಾಗಿ ಜಿಲ್ಲೆಯಲ್ಲೂ ಟರ್ಮಿನಲ್ಸ್ ಸ್ಥಾಪನೆ ಸ್ಥಳಾವಕಾಶಕ್ಕಾಗಿ ಜಿಲ್ಲಾಧಿಕಾರಿಗಳ ಮೂಲಕ ತಹಶೀಲ್ದಾರ್‌ಗಳಿಗೆ ಮಾಹಿತಿ ನೀಡಲಾಗಿದ್ದು ಆದಷ್ಟು ಬೇಗ ಅಗತ್ಯವಿರುವ ಸ್ಥಳಾವಕಾಶ ಒದಗಿಸುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಜಿಲ್ಲೆಗೊಂದು ನಿರ್ಮಾಣವಾಗುತ್ತಿರುವ ಟ್ರಕ್ ಟರ್ಮಿನಲ್‌ಅನ್ನು 30 ರಿಂದ 40 ಎಕರೆ ಜಾಗದಲ್ಲಿ 2 ಸಾವಿರ ವಾಹನ ನಿರ್ಮಾಣ ಸಾಮರ್ಥ್ಯದಲ್ಲಿ ನಿರ್ಮಿಸಲಾಗುವುದು. ಇದರಲ್ಲಿ ಶೌಚಾಲಯ, ವ್ಯಾಯಾಮ, ಶಾಲೆ, ಎಟಿಎಂ, ಪೊಲೀಸ್ ಸ್ಟೇಷನ್, ಬ್ಯಾಂಕ್, ಶಾಪಿಂಗ್ ಮಾಲ್ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಇದು ಟ್ರಕ್ ,ಲಾರಿ ಚಾಲಕರಿಗೆ ನೆರವಾಗುವ ಜತೆಗೆ ಉದ್ಯೋಗ ಅವಕಾಶವನ್ನು ಸೃಷ್ಟಿಸಿ ಮಿನಿಟೌನ್ ಶಿಪ್‌ನಂತೆ ನಿರ್ಮಾಣಗೊಳ್ಳಲಿದೆ ಎಂದರು.

ರಾಜ್ಯದಾದ್ಯಂತ ಲಾರಿ, ಟ್ರಕ್ ನಿರ್ವಹಣೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್ಸ್ ನಿರ್ಮಿಸಲು, ಸರ್ಕಾರಿ ಜಮೀನು ಗುರುತಿಸಿ ಸಂಸ್ಥೆಗೆ ಹಂಚಿಕೆ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಭೂಲಭ್ಯತೆಯ ಹಾಗೂ ಅನುದಾನ ಲಭ್ಯತೆಯ ಆಧಾರದ ಮೇಲೆ ಯೋಜನೆಗಳನ್ನು ಕೈಗೊಳ್ಳಲಾಗುವಿದು. ಪಿಪಿಟಿ ಮಾದರಿಯಲ್ಲೂ ಆರಂಭಿಸುವ ಚಿಂತನೆಯಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಸ್ಥಳಾವಕಾಶ ಗುರುತಿಸಲು ಜಿಲ್ಲಾಧಿಕಾರಿಯವರಿಗೆ ತಿಳಿಸಲಾಗಿದೆ. ಜಿಲ್ಲೆಯಲ್ಲೂ ಶೀಘ್ರವಾಗಿ ಟರ್ಮಿನಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಟ್ರಕ್ ‌ಟರ್ಮಿನಲ್ಸ್‌ನಂತೆ ರಸ್ತೆಬದಿಗಳಲ್ಲಿ ಟ್ರಕ್ ನಿರ್ವಹಣೆಗಾರರಿಗೆ 10 ರಿಂದ 15 ನಿಮಿಷ ವಿಶ್ರಾಂತಿ ಪಡೆಯಲು ಹಾಗೂ ವಸ್ತುಗಳ ಖರೀದಿಸಲು ಅನುಕೂಲವಾಗುವಂತೆ 2 ಎಕರೆಯಲ್ಲಿ ಶಾಪಿಂಗ್ ಸೆಂಟರ್‌ಗಳ ನಿರ್ಮಾಣ ಮಾಡಲಾಗುವುದು. ರಾಜ್ಯದಲ್ಲಿ 20 ಕಡೆಗಳಲ್ಲಿ ಇದನ್ನು ‌ಸ್ಥಾಪಿಸುವ ಚಿಂತನೆಯಿದ್ದು, ಮೊದಲನೇ ಹಂತದಲ್ಲಿ ‌10 ಕಡೆಯಲ್ಲಾದರೂ ಶಾಪಿಂಗ್ ಸೆಂಟರ್‌ಗಳು ಆರಂಭವಾಗಲಿದೆ‌ ಎಂದರು.
ಸಭೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಅಪರ ಜಿಲ್ಲಾಧಿಕಾರಿ ವಿಜಯ, ಈ. ರವಿಕುಮಾರ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್‌ಕುಮಾರ್ ಸೇರಿದಂತೆ ತಹಶಿಲ್ದಾರ್‌ಗಳು, ಕೆ.ಐ.ಎ.ಡಿ.ಬಿ. ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore ruralKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು: ಗ್ರಾಮಾಂತರ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಟಿಎನ್’ಸಿಸಿ ವಿದ್ಯಾರ್ಥಿ ದೀಕ್ಷಿತ್’ಗೆ ಮುಖ್ಯಮಂತ್ರಿಗಳ ಬಂಗಾರದ ಪದಕ

Next Post

ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ

kalpa News

kalpa News

Next Post
ಬಳ್ಳಾರಿ ಜಿಲ್ಲೆಯ ಎಸ್’ಎಸ್’ಎಲ್’ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ

ಬಳ್ಳಾರಿ ಜಿಲ್ಲೆಯ ಎಸ್'ಎಸ್'ಎಲ್'ಸಿ ಮಕ್ಕಳೇ: ನಿಮಗಾಗಿ ಇದೋ ಆರಂಭವಾಗಿದೆ ಸಹಾಯವಾಣಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL