ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಭಾಗವಾಗಿ ಜಿಲ್ಲೆಯಾದ್ಯಂತ ಇಂದು ನಡೆದ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್. ಲತಾ DC Latha ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊಸಕೋಟೆ ತಾಲೂಕು ಆನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ,ಹಾರೋಹಳ್ಳಿ,ಕೋಟೂರ,ಸೂಲಿಬೆಲೆ ಹೋಬಳಿಯ ಅತ್ತಿಬೆಲೆ, ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಬಾಲೇಪುರ, ಹೊಸನಲ್ಲೂರಹಳ್ಳಿ, ನಲ್ಲೂರು ಮತ್ತಿತರ ಗ್ರಾಮಗಳಲ್ಲಿನ ಮತಗಟ್ಟೆಗಳಿಗೆ ಭೇಟಿ ನೀಡಿ, ಸ್ಥಳೀಯ ಮತಗಟ್ಟೆ ಮಟ್ಟದ ಅಧಿಕಾರಿಗಳು ನಡೆಸುತ್ತಿರುವ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿ, ಹೊಸ ಮತದಾರರ ಸೇರ್ಪಡೆ, ಮತದಾರರ ಪಟ್ಟಿಗೆ ಆಧಾರ್ ಜೋಡಣೆ, ಹೆಸರು ತೆಗೆದು ಹಾಕಲು ಅನುಸರಿಸುತ್ತಿರುವ ಕ್ರಮಗಳನ್ನು ಪರಿಶೀಲಿಸಿ, ಅಗತ್ಯ ಸಲಹೆ, ಸೂಚನೆ ನೀಡಿದರು.

Also read: ಸ್ವಯಂ ವೈಯಕ್ತಿಕ ಅಂಶಗಳಿಂದ ಸೃಜನಶೀಲತೆಯು ಹೊರಹೊಮ್ಮುತ್ತದೆ: ಹೊನ್ನಾಳಿ ಚಂದ್ರಶೇಖರ್
ಅಪರ ಜಿಲ್ಲಾಧಿಕಾರಿ ವಿಜಯಾ ಈ ರವಿಕುಮಾರ್,ಚುನಾವಣಾ ವಿಭಾಗದ ತಹಸೀಲ್ದಾರ ರಾಜೀವಲೋಚನ ಸೇರಿದಂತೆ ಜಿಲ್ಲೆಯ ಎಲ್ಲ ತಹಸೀಲ್ದಾರರು, ನಿಯೋಜಿತ ಅಧಿಕಾರಿಗಳು ಇಂದು ಮನೆ ಮನೆ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.












Discussion about this post