Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂ. ಗ್ರಾಮಾಂತರ

ನೆಪ ಹೇಳಿದರೆ ಸಸ್ಪೆಂಡ್ ಆಗ್ತೀರಾ: ಬೆಂಗಳೂರು ಗ್ರಾಮಾಂತರ ಡಿಸಿ ಖಡಕ್ ಎಚ್ಚರಿಕೆ

ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ

September 16, 2022
in ಬೆಂ. ಗ್ರಾಮಾಂತರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು ಗ್ರಾಮಾಂತರ  |

ಜಿಲ್ಲೆಯ ಪುರಸಭೆ, ನಗರಸಭೆಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ, ಸಾರ್ವಜನಿಕರಲ್ಲಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಬೇಕು. ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶ ವತಿಯಿಂದ ನಡೆದ ರಾಷ್ಟ್ರೀಯ ಹಸಿರು ನ್ಯಾಯ ಪೀಠವು ನೀಡಿರುವ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಣೆಯ ನಿಯಮಾವಳಿಗಳು-2016ರಲ್ಲಿ ತಿಳಿಸಿರುವಂತೆ ಘನತ್ಯಾಜ್ಯ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೆಲವು ಘನತ್ಯಾಜ್ಯ ವಿಲೇವಾರಿ ಘಟಕಗಳು ಹೊರತುಪಡಿಸಿದರೆ ಉಳಿದ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ ತೃಪ್ತಿದಾಯಕವಾಗಿಲ್ಲ. ಎಲ್ಲಾ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅವುಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು, ಸಂಗ್ರಹಿಸಿದ ತ್ಯಾಜ್ಯವನ್ನು ಬೇರ್ಪಡಿಸಿ ವಿಲೇವಾರಿ ಮಾಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರತಿನಿತ್ಯದ ಕಾರ್ಯನಿರ್ವಹಣೆಗೆ ಅಗತ್ಯವಾಗಿರುವ ಪರಿಕರಗಳನ್ನು ಖರೀದಿಸಿ ಬಳಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಯುಎಲ್‍ಬಿಗಳಲ್ಲಿ ಸಮರ್ಪಕ ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ಕೊಡಬೇಕು. ಸಾರ್ವಜನಿಕರು ಮನೆಯಲ್ಲಿ ಹಸಿ ಕಸ, ಒಣ ಕಸ ವಿಂಗಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ನಗರ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಲ್ಲಿಯೇ ಹಾಕಬೇಕು. ಸ್ವಚ್ಛತಾ ಕ್ರಮಗಳ ಪಾಲನೆ ಕುರಿತು ಕರಪತ್ರಗಳು, ಭಿತ್ತಿಪತ್ರಗಳ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಹೆಚ್ಚಿನ ಅರಿವು ಮೂಡಿಸುವ ಕೆಲಸವನ್ನು ನಗರ ಸ್ಥಳೀಯ ಸಂಸ್ಥೆಗಳು ಮಾಡಬೇಕು. ನಿಯಮ ಉಲ್ಲಂಘಿಸಿದ್ದಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮಗಳ ಅನ್ವಯ ಸಾರ್ವಜನಿಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿದರು.
ಪರಿಸರ ರಕ್ಷಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್‌ ಕೆಲವು ನಿಯಮಾವಳಿಗಳನ್ನು ನೀಡಿದೆ. ಅದರಂತೆ ತ್ಯಾಜ್ಯ ನಿರ್ವಹಣೆ ಮಾಡಬೇಕು . ಪ್ಲಾಸ್ಟಿಕ್‌ ಮಾರಾಟ ನಿಯಂತ್ರಿಸಬೇಕು. ಪ್ಲಾಸ್ಟಿಕ್‌ ಉತ್ಪಾದಕರು ಹಾಗೂ ಮಾರಾಟಗಾರರಿಗೆ ತಿಳಿವಳಿಕೆ ನೀಡಬೇಕು. ತಹಸೀಲ್ದಾರ್, ನಗರಸಭೆ, ಪುರಸಭೆ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಜಂಟಿಯಾಗಿ ಪ್ಲಾಸ್ಟಿಕ್ ಮಾರಾಟಗಾರರ ಮಳಿಗೆಗಳ ಮೇಲೆ ವಾರದಲ್ಲಿ ಎರಡು ಬಾರಿ ದಾಳಿ ನಡೆಸಿ, ಪ್ರಕರಣ ದಾಖಲಿಸಬೇಕು. ದಾಳಿ ವೇಳೆ ವಿಡಿಯೋ ಹಾಗೂ ಫೋಟೋಗ್ರಾಪಿ ಕಡ್ಡಾಯವಾಗಿ ಮಾಡಬೇಕು. ಪ್ರಕರಣ ದಾಖಲಿಸಲು ಸಾಕ್ಷಿಗಳನ್ನು ಕಲೆಹಾಕಬೇಕು‌. ಸ್ವಚ್ಚತೆ ಕಾಪಾಡದ ಮಳಿಗೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಪ್ಲಾಸ್ಟಿಕ್‌ ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸದೇ ನೆಪ ಹೇಳುವ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು.

Also read: ಬದುಕಿಗೆ ಛಲ ಮುಖ್ಯ, ಸಾಧನೆಗೆ ಛಲವೇ ಅಡಿಪಾಯ: ಪ್ರೊ. ಹೂವಯ್ಯಗೌಡ ಕಿವಿಮಾತು

ಪೌರ ಕಾರ್ಮಿಕರು ವಾಹನದ ಮೂಲಕ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿಬೇಕು. ಈ ವೇಳೆ ತ್ಯಾಜ್ಯ ಬೇರ್ಪಡಿಸಿಬೇಕು. ಬೀದಿ ಬದಿ ಹಾಗೂ ಸಂತೆಯ ವ್ಯಾಪಾರಿಗಳು ಸಂಜೆ ವೇಳೆ ಕಸವನ್ನು ರಸ್ತೆ ಬದಿಗೆ ಎಸೆದು ಹೋಗುತ್ತಾರೆ, ಇದನ್ನು ನಿಯಂತ್ರಿಸಲು ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ ಸ್ವಚ್ಚತೆಯ ಕುರಿತು ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯ ನೆಲಭರ್ತಿ ಜಾಗ ಹೊಂದಿರದ ನಗರ ಸ್ಥಳೀಯ ಸಂಸ್ಥೆಗಳಿಗೆ ಜಾಗದ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಘನತ್ಯಾಜ್ಯದಿಂದ ಬರುವ ಹೊರಹೊಮ್ಮುವ ಲಿಯಾಸಿಯೇಟ್ ದ್ರವವು ಜಲಮೂಲಗಳಾದ ನದಿ, ಕೆರೆ, ನೀರಿನ ಹೊಂಡಗಳಿಗೆ ಸೇರಿ ಕಲುಷಿತಗೊಳ್ಳದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಘನತ್ಯಾಜ್ಯ ಸಮಗ್ರ ನಿರ್ವಹಣೆಯ ಬಗ್ಗೆ ಹೆಚ್ಚಾಗಿ ಐ.ಇ.ಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಹಸಿರು ನ್ಯಾಯಪೀಠದ ಆದೇಶದಲ್ಲಿ ಸೂಚಿಸಿರುವಂತೆ ಸಣ್ಣ ಮತ್ತು ದೊಡ್ಡ ಕಾಲುವೆಗಳಿಗೆ/ ನದಿ ನೀರಿನ ಮೂಲಗಳಿಗೆ ಘನತ್ಯಾಜ್ಯ ವಸ್ತುಗಳ ಕಲುಷಿತಗೊಳ್ಳದಂತೆ ನೆಟ್‌ಗಳನ್ನು ಅಳವಡಿಸಬೇಕು. ಕಸವನ್ನು ಬೀದಿಗಳಲ್ಲಿ ಎಸೆಯುವಂತೆ ಅಥವಾ ಸುಡದಂತೆ ಕ್ರಮ ವಹಿಸಬೇಕು, Bilk Waste Generators ಗಳ ಮೂಲಕ ಆಯಾ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣಾ ಘಟಕದ ಆವರಣದಲ್ಲಿಯೇ ಕಸವನ್ನು ನಿರ್ವಹಣೆ ಮಾಡಿ ಕಾಂಪೋಸ್ಟಿಂಗ್ ಮಾಡಿಸಬೇಕು.

ಚಿಂದಿ ಆಯುವವರನ್ನು, ಸ್ವ-ಸಹಾಯ ಗುಂಪುಗಳನ್ನು ಘನತ್ಯಾಜ್ಯ ನಿರ್ವಹಣೆಯಲ್ಲಿ ಪಾಲುದಾರರಾಗಿ ಮಾಡಿಕೊಂಡು, ಹಸಿರು ನ್ಯಾಯ ಪೀಠದ ಆದೇಶದಂತೆ ಮೇಟೀರಿಯಲ್ ರಿಕೋವಲ್ ಫೆಸಿಲಿಟಿ ಅಥವಾ ಸೆಕೆಂಡ್ ಸ್ಟೋರೇಜ್ ಸ್ಥಾಪಿಸಿರುವ ಕುರಿತು, ವಿಕೇಂದ್ರಿಕೃತ ಸಂಸ್ಕರಣಾ ಘಟಕಗಳನ್ನು ಅಳವಡಿಸಬೇಕು, ಎಲ್ಲಾ ನಗರಸಭೆ/ಪುರಸಭೆಗಳಲ್ಲಿ ಪಾರ್ಕ್‌ ಉದ್ಯಾನವನಗಳಲ್ಲಿ ರಾಸಾಯನಿಕ ಗೊಬ್ಬರ ಬಳಸದಂತೆ ಕ್ರಮವಹಿಸಬೇಕು ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣೆಯಲ್ಲಿ ನಿಯಮ 2016ರಂತೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಳೀಯ ಸಂಸ್ಥೆಗಳಿಗೆ Environment compensation ದಂಡ ವಿಧಿಸಬೇಕು ಎಂದರು.
ಘನ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ಈಗಾಗಲೇ ನೋಟೀಸ್ ಜಾರಿಮಾಡಲಾಗಿದೆ ಎಂದ ಜಿಲ್ಲಾಧಿಯವರು, ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರಲ್ಲದೆ ಘನತ್ಯಾಜ್ಯ ನಿರ್ವಹಣೆ ವಿಫಲವಾದಲ್ಲಿ ನಿಯಮಾನುಸಾರ ಅಂತಹ ಅಧಿಕಾರಿಗಳನ್ನು ದಂಡನೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ದೇವನಹಳ್ಳಿ ಮತ್ತು ಹೊಸಕೋಟೆಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಅನಿಲ್‌ಕುಮಾರ್, ದೊಡ್ಡಬಳ್ಳಾಪುರದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ರಮೇಶ್.ಕೆ.ಎಂ, ನೆಲಮಂಗಲದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಮರಿಮಾದಯ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore ruralKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು: ಗ್ರಾಮಾಂತರ
Previous Post

ಬದುಕಿಗೆ ಛಲ ಮುಖ್ಯ, ಸಾಧನೆಗೆ ಛಲವೇ ಅಡಿಪಾಯ: ಪ್ರೊ. ಹೂವಯ್ಯಗೌಡ ಕಿವಿಮಾತು

Next Post

ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ನಿವೇಶನಗಳ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ನಿವೇಶನಗಳ ರದ್ದು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

July 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!