ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
ಹೊಸಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ವೀಪ್ ಘಟಕದ ಸಹಯೋಗದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಜಾಗೃತಿ ಜಾಥಾ ಜರುಗಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ, ತಹಸೀಲ್ದಾರ ಕೆ. ಮಹೇಶಕುಮಾರ ಅವರು ಹಸಿರು ನಿಶಾನೆ ತೋರಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ಅದರದ್ದೇ ಆದ ಮಹತ್ವವಿದೆ.18 ವರ್ಷ ತುಂಬಿದ ಯುವ ಮತದಾರರು ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು ಎಂದರು.

ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ,ಪ್ರಾಚಾರ್ಯ ಮುನಿನಾರಾಯಣಪ್ಪ ಮತ್ತಿತರರು ಜಾಥಾದಲ್ಲಿ ಭಾಗವಹಿಸಿದ್ದರು.











Discussion about this post