ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೀಶ್ವರ ಗ್ರಾಮ ಪಂಚಾಯಿತಿಯ ಯುವಕರ ವಾಲಿಬಾಲ್ ತಂಡವು ಪ್ರಥಮ ಸ್ಥಾನ ಹಾಗೂ ಚನ್ನಹಳ್ಳಿ ಗ್ರಾಮ ಪಂಚಾಯಿತಿಯ ಯುವತಿಯರ ಕಬ್ಬಡಿ ತಂಡವು ದ್ವಿತೀಯ ಸ್ಥಾನ ಪಡೆದು ಸಂಭ್ರಮಿಸಿದರು.
ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟದ ಪುರುಷರ ವಾಲಿಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಮತ್ತು ಮಹಿಳೆಯರ ಕಬ್ಬಡಿ ಕ್ರೀಡೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜಿಲ್ಲೆಯ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕಿ ಗೀತಾ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post