ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷರು ಕರ್ನಾಟಕದ ಹೆಮ್ಮೆ, ಪರಂಪರೆ ಹಾಗೂ ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ ಎಂದು ಮಹಾಘಟಬಂಧನದ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ HDKumaraswamy ವಾಗ್ದಾಳಿ ನಡೆಸಿದ್ದಾರೆ.
ಯಾತಕ್ಕಾಗಿ ಒಂದಾಗಿದ್ದೀರಿ ನೀವು? ಅಧಿಕಾರಕ್ಕಾಗಿಯೋ ಲೂಟಿ ಹೊಡೆಯಲೋ? ಆಗುವುದಾದರೆ ಒಂದಾಗಿ ನೀವು, ರಾಜ್ಯದಲ್ಲಿ ಕಳೆದ 60 ದಿನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ಪರಿಹಾರ ಕೊಡಲು. ಷರತ್ತಿಲ್ಲದೆ 5 ಗ್ಯಾರೆಂಟಿ ಜಾರಿ ಮಾಡಲು, ಬರಗಾಲದಿಂದ ಕಂಗಾಲಾಗಿರುವ ರೈತರಿಗೆ ಸಹಾಯ ಮಾಡಲು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ರಾಜ್ಯದಲ್ಲಿ ನೆಡೆಯುತ್ತಿರುವ ವರ್ಗಾವಣೆ ಮಾಫಿಯಾ ತಡಿಯಲು, ರಾಜ್ಯದಲ್ಲಿ ಹೊಸದಾಗಿ ಜಾರಿಗೆ ಬಂದಿರುವ ಹಿಂಪಡಿಯಲು, ರಾಜ್ಯದಲ್ಲಿ ನೇಮಕವಾಗಿರುವ ಶಾಡೋ ಸಿಎಂ ಮತ್ತು ಶಾಡೋ ಮಂತ್ರಿಗಳ ಹಾವಳಿ ತಪ್ಪಿಸಲು ಎಂದು ಟೀಕಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮೂಲಕ ಟೀಕಿಸಿರುವ ಅವರು, ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ…? ಎಂದು ಪ್ರಶ್ನಿಸಿದ್ದಾರೆ.
ಇದು ರಾಜ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರ್ಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂತಹ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆತಿಥ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post