ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಸಾಗರ |
ಸಾಗರದ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ #Sagara Marikamba Fair ನಟ ಶಿವರಾಜ್ ಕುಮಾರ್ #Shivarajkumar ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.
ಫೆಬ್ರವರಿ 2 ಮತ್ತು 3ರಿಂದ ಜಾತ್ರಾ ಮಹೋತ್ಸವ ನಡೆಯಲಿದ್ದು, ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೆಂಗಳೂರಿನಲ್ಲಿ ನಟಶಿವರಾಜ್ ಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಜಾತ್ರೆಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಶಾಸಕರ ಆಹ್ವಾನಕ್ಕೆ ಶಿವರಾಜ್ ಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ಅವರು ಅತ್ಯಂತ ಪ್ರೀತಿಯಿಂದ ಸ್ಪಂದಿಸಿದ್ದು, ಜಾತ್ರೆಗೆ ಬರುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















