No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಿಕ್ಷಣ ಸಂಸ್ಥೆಗಳ ಸಮೀಪ ಗಾಂಜಾ ಮಾರಾಟ; ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

kalpa News by kalpa News
February 9, 2024
in ಬೆಂಗಳೂರು ನಗರ
0
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಸೂಚನೆ ನೀಡಿದ್ದಾರೆ.

ಈ ಸಂಬಂಧ ಶಾಸಕ ದಿನೇಶ್‌ ಗೂಳಿಗೌಡ MLA Dinesh Guligowda ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.
ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಎಚ್ಚರಿಸಿದ್ದರು.

ಗಾಂಜಾ ಮತ್ತು ಮಾದಕವಸ್ತುಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ವಿಶೇಷ ದಳ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಲು ಪತ್ರದಲ್ಲಿ ಮನವಿ ಮಾಡಿದ್ದರು.

Also read: ದೆಹಲಿಯಲ್ಲಿ ವಿಜಯೇಂದ್ರ, ಯತ್ನಾಳ್, ಜಾರಕಿಹೊಳಿ ಭೇಟಿ | ಬಿಜೆಪಿ ರಾಜ್ಯಾಧ್ಯಕ್ಷರು ನಗುತ್ತಾ ಹೇಳಿದ್ದೇನು?

ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಹೆಚ್ಚುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಮಹಾ ನಿರ್ದೇಶಕರು, ಈ ಬಗ್ಗ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿ, ಈ ಬಗ್ಗೆ ಪರಿಶೀಲನೆ ನಡೆಸಲು ನಿರ್ದೇಶನ ನೀಡಿದ್ದಾರೆ.
ಮಕ್ಕಳು ಭವಿಷ್ಯದ ರೂವಾರಿಗಳಾಗಿದ್ದು, ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳ ಸಮೀಪದಲ್ಲಿಯೇ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಸಂಬಂಧ ಕ್ರಮ ವಹಿಸಬೇಕು. ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಶಾಸಕ ದಿನೇಶ್‌ ಗೂಳಿಗೌಡ ಪತ್ರದಲ್ಲೇನಿದೆ?
“ಮಕ್ಕಳು ದೇವರ ರಾಜ್ಯದ ಪ್ರಜೆಗಳು”. ರಾಷ್ಟ್ರಕವಿ ಕುವೆಂಪು ಅವರ ಈ ಮಾತು ಅಕ್ಷರಶಃ ಸತ್ಯ. ಆದರೆ, ಈ ನಾಡಿನಲ್ಲಿ ನಿಜಕ್ಕೂ ಏನಾಗುತ್ತಿದೆ? ಮಕ್ಕಳು ನೀತಿವಂತರಾಗಿ, ಸುಸಂಸ್ಕೃತರಾಗಿ, ದುಶ್ಚಟಗಳಿಲ್ಲದೇ ಕಲಿಕೆ ಮಾಡುತ್ತಿದ್ದಾರೆಯೇ? ಅಂಥದ್ದೊಂದು ಸುಂದರ ಜೀವನ ಅವರದ್ದಾಗಿದೆಯೇ? ಎಂಬ ಪ್ರಶ್ನೆಯನ್ನು ಕೇಳಿಕೊಂಡಾಗ, ಸಿಗುವ ಉತ್ತರ “ಇಲ್ಲ”. ನಾನಿಂದು ಅತ್ಯಂತ ವಿಷಾದ ಹಾಗೂ ನೋವಿನಿಂದ ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಅದೂ ನೊಂದ ಮಕ್ಕಳ ಹಾಗೂ ಅವರ ಪೋಷಕರ ಪರವಾಗಿ ಸರ್ಕಾರದ ಗಮನಕ್ಕೆ ತರಲು ಬಯಸುತ್ತಿದ್ದೇನೆ. ಮಾದಕ ವ್ಯಸನಗಳಿಗೆ ಇಂದು ಅನೇಕ ಮಕ್ಕಳು ಬಲಿಯಾಗುತ್ತಿದ್ದಾರೆ. ಬದುಕನ್ನು ಕಟ್ಟಿಕೊಳ್ಳಬೇಕಾದ ಈ ಸಮಯದಲ್ಲಿ ಗಾಂಜಾ ಮತ್ತಿತರೆ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದನ್ನು ನಾವೀಗ ತಪ್ಪಿಸಬೇಕಿದೆ. ಮಕ್ಕಳಿಗೆ ಸುಸ್ಥಿರ ಬದುಕನ್ನು ಕಟ್ಟಿಕೊಡಲು ಬಲಿಷ್ಠ ಹಾಗೂ ಬಲಾಢ್ಯ ಕಾನೊನು ರೂಪಿಸಬೇಕಿದೆ.
Kalahamsa Infotech private limitedಹಾಗಂತ ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ಹಲವು ದಶಕಗಳಿಂದ ಬೆನ್ನು ಹತ್ತಿರುವ ಪೆಡಂಭೂತವಾಗಿದೆ. ಈ ಮಧ್ಯೆ ಅನೇಕ ಸರ್ಕಾರಗಳು ಆಳಿ ಹೋಗಿವೆ. ಅದೆಷ್ಟೋ ದಕ್ಷ ಅಧಿಕಾರಿಗಳ ಅವಧಿಗಳು ಮುಗಿದು ಹೋಗಿವೆ. ಆದರೆ, ಇದುವರೆಗೂ ಇಂಥ ಸಮಸ್ಯೆಯನ್ನು ಬೇರು ಸಮೇತ ಕಿತ್ತೊಗೆಯಲು ಸಾಧ್ಯವೇ ಆಗಿಲ್ಲ. ‌ಮಾದಕ ವ್ಯಸನಗಳಿಗೆ, ಗಾಂಜಾ ವಹಿವಾಟಿಗೆ ಪದೇ ಪದೇ ಮಕ್ಕಳು ಟಾರ್ಗೆಟ್ ಆಗುತ್ತಿರುವ ಬಗ್ಗೆ ನನಗೆ ಸಾಕಷ್ಟು ದೂರುಗಳು ಬಂದಿವೆ. ಅನೇಕ ಪಾಲಕರ ಅಳಲು ಹೀಗಾಗಿ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುವುದು ಈಗಿನ ತುರ್ತು ಕ್ರಮಗಳಲ್ಲಿ ಒಂದು ಎಂಬುದು ನನ್ನ ಭಾವನೆಯಾಗಿದೆ.

ಏಕೆಂದರೆ ಗಾಂಜಾ ಹಾವಳಿ ದೊಡ್ಡ ಪಿಡುಗಿನಂತೆ ವ್ಯಾಪಿಸಿದೆ. ಇದರ ಸುಳಿಗೆ ಯುವಜನತೆ ದೊಡ್ಡ ಸಂಖ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಶೈಕ್ಷಣಿಕ ಬದುಕು ಮೂರಾಬಟ್ಟೆಯಾಗಿದೆ. ಗಾಂಜಾ ಖರೀದಿಗೆ ಹಣವಿಲ್ಲದೆ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳ್ಳತನ, ಸುಲಿಗೆಗಳಿಗೆ ಕೆಲವರು ಇಳಿದಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇದು ಪೋಷಕರನ್ನು ಕಂಗೆಡಿಸಿದೆ. ಈ ಸಕ್ರಿಯ ಜಾಲಕ್ಕೆ ಕೊನೆ ಹಾಡಲೇಬೇಕಿದೆ.
ಇದನ್ನು ಕೂಲಂಕಷವಾಗಿ ನೋಡುತ್ತಾ ಹೋದರೆ ಪೊಲೀಸರಿಗೆ ಮಾಹಿತಿ ಇದ್ದರೂ ಏಕೆ ಸುಮ್ಮನಿದ್ದಾರೆ ಎಂಬ ಪ್ರಶ್ನೆಯನ್ನು ಮಾಡುತ್ತಿದ್ದಾರೆ. ಆದರೆ, ಇನ್ನು ಮುಂದೆ ಹಾಗಾಗದೇ ಗಾಂಜಾ ಮಾರಾಟ ಹಾಗೂ ಸೇವನೆ ಜಾಲವನ್ನು ಬೇರು ಸಮೇತ ಕಿತ್ತೊಗೆಯಲು ತಾವು ಮುಂದಾಗಬೇಕು. ಇದಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿ ತಪ್ಪಿತಸ್ಥರಿಗೆ ಕಾನೂನಿನಡಿ ಕ್ರಮವನ್ನು ಜರುಗಿಸಬೇಕು.
ಸರ್ಕಾರ ತಗೆದುಕೊಳ್ಳಬಹುದಾದ ಕ್ರಮಗಳು

  • ಜಿಲ್ಲಾ ಮಟ್ಟದಲ್ಲಿ ವಿಶೇಷ ದಳವನ್ನು ರಚಿಸುವುದು. ಆ ದಳಕ್ಕೆ ಮುಕ್ತ ಅಧಿಕಾರ ಮತ್ತು ಬೆಂಬಲ ನೀಡುವುದು
  • ಸಾರ್ವಜನಿಕರ ಸಹಕಾರ ಪಡೆಯಲು ಸಹಾಯವಾಣಿಯನ್ನು ಆರಂಭಿಸುವುದು
  • ಜನರು ಮುಕ್ತವಾಗಿ ಮಾಹಿತಿ ನೀಡುವಂತಾಗಲು ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡುವುದಾಗಿ ಮನವರಿಕೆ ಮಾಡುವುದು
  • ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಶೇಷ ಗಸ್ತು ವ್ಯವಸ್ಥೆ ಮಾಡುವುದು
  • ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು
  • ಇಂಥ ಜಾಲದ ಬಗ್ಗೆ ಗಮನಕ್ಕೆ ಬಂದರೆ ಶಾಲಾ ಮುಖ್ಯಸ್ಥರು, ಇಲ್ಲವೇ ಪೋಷಕರ ಗಮನಕ್ಕೆ ತರುವಂತೆ ಮನವರಿಕೆ ಮಾಡುವುದು

ಕೂಡಲೇ ನಮ್ಮ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವ್ಯಸನ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಡಬೇಕು. ಈ ನಿಟ್ಟಿನಲ್ಲಿ ಕೈಗೊಳ್ಳಲು ಮನವಿ

(ವರದಿ: ಡಿ.ಎಲ್. ಹರೀಶ್, ಬೆಂಗಳೂರು) 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: BangaloreCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೆಹಲಿಯಲ್ಲಿ ವಿಜಯೇಂದ್ರ, ಯತ್ನಾಳ್, ಜಾರಕಿಹೊಳಿ ಭೇಟಿ | ಬಿಜೆಪಿ ರಾಜ್ಯಾಧ್ಯಕ್ಷರು ನಗುತ್ತಾ ಹೇಳಿದ್ದೇನು?

Next Post

ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ಪೂರ್ವನಿಯೋಜಿತ ನಾಟಕ: ಸಂಸದ ರಾಘವೇಂದ್ರ

kalpa News

kalpa News

Next Post
ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ಪೂರ್ವನಿಯೋಜಿತ ನಾಟಕ: ಸಂಸದ ರಾಘವೇಂದ್ರ

ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ಪೂರ್ವನಿಯೋಜಿತ ನಾಟಕ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL