ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅನಾರೋಗ್ಯಕ್ಕೆ ಒಳಗಾಗಿದ್ದ ಸಾಲುಮರದ ತಿಮ್ಮಕ್ಕ Saalumarada Thimmakka ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿದ್ದಾರೆ.
ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅವರ ಪುತ್ರ ಉಮೇಶ್ ಸ್ಪಷ್ಟನೆ ನೀಡಿದ್ದಾರೆ.
ನಮ್ಮ ತಾಯಿ ಚೇತರಿಸಿಕೊಂಡಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದಿದ್ದಾರೆ.
Also read: ನಾವೇ ಟಾರ್ಗೆಟ್, ಬದುಕಲು ಭಯವಾಗ್ತಿದೆ: ಬಿಜೆಪಿ ತಂಡದ ಮುಂದೆ ರಾಗಿಗುಡ್ಡ ಜನರ ಕಣ್ಣೀರು
ತಾಯಿಯ ಆರೋಗ್ಯದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡಿಸುತ್ತಿರುವುದನ್ನು ಬೇಸರ ವ್ಯಕ್ತಪಡಿಸಿದ ಅವರು, ಯಾರೂ ಈ ರೀತಿ ಮಾಡದಂತೆ ಮನವಿ ಮಾಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















